ದ್ವೇಷ ಮತ್ತು ಹಿಂಸಾಚಾರದ ಯಾವುದೇ ಘಟನೆಯನ್ನು ತಪ್ಪಿಸಲು ಪಶ್ಚಿಮ ಬಂಗಾಳ ಸರ್ಕಾರ ‘ದಿ ಕೇರಳ ಸ್ಟೋರಿ’ ಸಿನಿಮಾ ನಿಷೇಧಿಸಿದೆ.
ಅದಾ ಶರ್ಮಾ ನಟಿಸಿರುವ ಈ ಚಿತ್ರ ಶುಕ್ರವಾರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ರಾಜ್ಯದಲ್ಲಿ ಶಾಂತಿ ಕಾಪಾಡಲು’ ‘ದಿ ಕೇರಳ ಸ್ಟೋರಿ’ ಸಿನಿಮಾವನ್ನು ನಿಷೇಧಿಸಲು ಪಶ್ಚಿಮ ಬಂಗಾಳ ಸರ್ಕಾರ ಸೋಮವಾರ ನಿರ್ಧರಿಸಿದೆ.
ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಮಾಹಿತಿ ನೀಡಿ, ‘ದಿ ಕೇರಳ ಸ್ಟೋರಿ’ ಸಿನಿಮಾವನ್ನು ನಿಷೇಧಿಸಲು ಪಶ್ಚಿಮ ಬಂಗಾಳ ಸರ್ಕಾರ ನಿರ್ಧರಿಸಿದೆ. ಇದು ಯಾವುದೇ ದ್ವೇಷ ಮತ್ತು ಹಿಂಸಾಚಾರದ ಘಟನೆಯನ್ನು ತಪ್ಪಿಸಲು ಮತ್ತು ರಾಜ್ಯದಲ್ಲಿ ಶಾಂತಿಯನ್ನು ಕಾಪಾಡಲು ಕೈಗೊಂಡ ಕ್ರಮವಾಗಿದೆ ಎಂದು ಹೇಳಿದ್ದು, ಈ ಚಿತ್ರವನ್ನು ‘ವಿಕೃತ ಕಥೆ’ ಎಂದು ಕರೆದಿದ್ದಾರೆ.
ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಅವರು ಪಶ್ಚಿಮ ಬಂಗಾಳ ಸರ್ಕಾರದ ನಿರ್ಧಾರವನ್ನು ಟೀಕಿಸಿದರು. ಪ್ರತಿಪಕ್ಷಗಳು ‘ತುಷ್ಟೀಕರಣ ಮತ್ತು ವೋಟ್ ಬ್ಯಾಂಕ್ ರಾಜಕೀಯ ಮಾಡುತ್ತಿವೆ’ ಎಂದು ಹೇಳಿದ್ದಾರೆ.