
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಫ್ಯಾನ್ ಇಂಡಿಯಾ ಸಿನಿಮಾ ‘ಕೆಜಿಎಫ್ ಚಾಪ್ಟರ್ 2’ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ.
2022ರ ಏಪ್ರಿಲ್ 14 ರಂದು ‘ಕೆಜಿಎಫ್ ಚಾಪ್ಟರ್ 2’ ಬಿಡುಗಡೆಯಾಗಲಿದೆ ಎಂದು ಚಿತ್ರತಂಡದಿಂದ ಮಾಹಿತಿ ನೀಡಲಾಗಿದೆ.
ಕೊರೋನಾ ಕಾರಣದಿಂದ ಕಳೆದ ವರ್ಷ ಬಿಡುಗಡೆಯಾಗಬೇಕಿದ್ದ ಈ ಚಿತ್ರ ಜುಲೈ 16 ರಂದು ಬಿಡುಗಡೆ ಮಾಡುವುದಾಗಿ ಹೇಳಲಾಗಿತ್ತು. ಮತ್ತೆ ಕೊರೋನಾ ಲಾಕ್ ಡೌನ್ ಜಾರಿಯಾಗಿದ್ದರಿಂದ ಮುಂದಿನ ವರ್ಷ ಏಪ್ರಿಲ್ ಗೆ ರಿಲೀಸ್ ಡೇಟ್ ಫಿಕ್ಸ್ ಮಾಡಲಾಗಿದೆ.
ಇಂದಿನ ಅನಿಶ್ಚಿತತೆಗಳು ನಮ್ಮ ಸಂಕಲ್ಪವನ್ನು ವಿಳಂಬಗೊಳಿಸುತ್ತವೆ, ಆದರೆ ಭರವಸೆ ನೀಡಿದಂತೆಯೇ ನಾವು ಏಪ್ರಿಲ್ 14, 2022 ರಂದು ಚಿತ್ರಮಂದಿರಗಳಲ್ಲಿ ‘ಕೆಜಿಎಫ್ ಚಾಪ್ಟರ್ 2’ ಬಿಡುಗಡೆ ಮಾಡಲಿದ್ದೇವೆ ಎಂದು ಯಶ್ ಟ್ವೀಟ್ ಮಾಡಿದ್ದಾರೆ.