ಬೆಂಗಳೂರು: ಕೊರೊನಾ ಸೋಂಕು ತಡೆಗೆ ಲಾಕ್ ಡೌನ್ ಜಾರಿ ಮಾಡಿದ ಪರಿಣಾಮ ಸಂಕಷ್ಟದಲ್ಲಿರುವ ಚಿತ್ರರಂಗದ ಕಾರ್ಮಿಕರು ಮತ್ತು ತಂತ್ರಜ್ಞರಿಗೆ ನೆರವು ನೀಡಲು ನಟ ರಾಕಿಂಗ್ ಸ್ಟಾರ್ ಯಶ್ ಮುಂದಾಗಿದ್ದಾರೆ.
ಮೂರು ಸಾವಿರ ಮಂದಿಗೆ ಐದು ಸಾವಿರ ರೂಪಾಯಿ ನೀಡುವುದಾಗಿ ಪ್ರಕಟಿಸಿದ್ದಾರೆ. ಕಣ್ಣಿಗೆ ಕಾಣದ ವೈರಸ್ ಮನುಷ್ಯನ ಬದುಕನ್ನು ಬುಡಮೇಲು ಮಾಡಿದ್ದು, ಕಳೆದ ಒಂದು ವರ್ಷದಿಂದ ನನ್ನ ಸಿನಿಮಾ ಕುಟುಂಬ ಅಸಹಾಯಕತೆಯಿಂದ ಕೈಕಟ್ಟಿ ಕುಳಿತಿದೆ. ಇದು ಮಾತನಾಡುವ ಸಮಯವಲ್ಲ. ಸಂಕಷ್ಟದಲ್ಲಿರುವವ ಜೊತೆ ನಿಲ್ಲುವ ಸಮಯವಾಗಿದೆ. ಹಾಗಾಗಿ, 3000ಕ್ಕೂ ಹೆಚ್ಚು ಸಿನಿಮಾ ಕಲಾವಿದರು, ತಂತ್ರಜ್ಞರು, ಕಾರ್ಮಿಕರ ಅಧಿಕೃತ ಖಾತೆಗಳಿಗೆ ಮೂರು ಸಾವಿರ ರೂಪಾಯಿಗಳನ್ನು ನನ್ನ ಸಂಪಾದನೆಯ ಹಣದಿಂದ ಭರಿಸಲು ನಿರ್ಧರಿಸಿದ್ದೇನೆ. ನಮ್ಮ ಒಕ್ಕೂಟದ ಅಧ್ಯಕ್ಷರಾದ ಸಾ.ರಾ. ಗೋವಿಂದು ಮತ್ತು ಪ್ರಧಾನ ಕಾರ್ಯದರ್ಶಿ ರವೀಂದ್ರನಾಥ್ ಅವರೊಂದಿಗೆ ಚರ್ಚಿಸಿದ್ದೇನೆ. ತಕ್ಷಣವೇ ತೊಂದರೆಯಲ್ಲಿರುವ 3000 ಕ್ಕೂ ಅಧಿಕ ಮಂದಿಯ ಖಾತೆಗೆ ತಲಾ 5 ಸಾವಿರ ರೂಪಾಯಿ ಜಮಾ ಮಾಡಲಾಗುವುದು ಎಂದು ಯಶ್ ಹೇಳಿದ್ದಾರೆ.