ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆಜಿಎಫ್ ಚಾಪ್ಟರ್ 2’ ಬಿಡುಗಡೆಯಾದಾಗಿನಿಂದಲೂ ಭರ್ಜರಿ ಪ್ರದರ್ಶನ ಕಾಣುತ್ತಿದೆ. 1000 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿರುವ ‘ಕೆಜಿಎಫ್ ಚಾಪ್ಟರ್ 2’ ಭಾರತೀಯ ಚಿತ್ರರಂಗದ ಅನೇಕ ದಾಖಲೆಗಳನ್ನು ಹಿಂದಿಕ್ಕಿದೆ.
ಇದೀಗ ‘ಕೆಜಿಎಫ್ ಚಾಪ್ಟರ್ 2’ ಮತ್ತೊಂದು ದಾಖಲೆಗೆ ಪಾತ್ರವಾಗಿದೆ. ದಕ್ಷಿಣ ಕೊರಿಯಾದಲ್ಲಿ ಕೂಡ ಚಿತ್ರ ಪ್ರದರ್ಶನ ಕಂಡಿದೆ. ಈ ಮೂಲಕ ದಕ್ಷಿಣ ಕೊರಿಯಾದಲ್ಲಿ ಪ್ರದರ್ಶನ ಕಂಡ ಮೊದಲ ಕನ್ನಡ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
‘ಕೆಜಿಎಫ್ ಚಾಪ್ಟರ್ 2’ ಇದುವರೆಗೆ 1129.38 ಕೋಟಿ ರೂ. ಕಲೆಕ್ಷನ್ ಮಾಡಿದೆ. ಸಂಜಯ್ ದತ್, ರವೀನಾ ಟಂಡನ್, ಶ್ರೀನಿಧಿ ಶೆಟ್ಟಿ, ಪ್ರಕಾಶ್ ರೈ, ಮಾಳವಿಕಾ ಅವಿನಾಶ್ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ.
ಕನ್ನಡ ಮಾತ್ರವಲ್ಲದೇ, ಹಿಂದಿ, ತೆಲುಗು, ತಮಿಳು, ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾದ ‘ಕೆಜಿಎಫ್ ಚಾಪ್ಟರ್ 2’ ಅಮೆರಿಕ, ಮಲೇಷಿಯಾ, ಸಿಂಗಾಪುರ, ಶ್ರೀಲಂಕಾ ಮೊದಲಾದ ದೇಶಗಳಲ್ಲಿಯೂ ಪ್ರದರ್ಶನ ಕಂಡಿದೆ. ಪ್ರಶಾಂತ್ ನೀಲ್ ನಿರ್ದೇಶನದ ಚಿತ್ರವನ್ನು ವಿಜಯ ಕಿರಂಗದೂರು ನಿರ್ಮಾಣ ಮಾಡಿದ್ದಾರೆ.