alex Certify ಕನ್ನಡ ಚಿತ್ರರಂಗಕ್ಕೆ ‌ʼದೊಡ್ಮನೆʼ ಮತ್ತೊಂದು ಕುಡಿ ಎಂಟ್ರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕನ್ನಡ ಚಿತ್ರರಂಗಕ್ಕೆ ‌ʼದೊಡ್ಮನೆʼ ಮತ್ತೊಂದು ಕುಡಿ ಎಂಟ್ರಿ

ವರನಟ ಡಾ. ರಾಜ್ ಕುಮಾರ್ ಅವರ ಹುಟ್ಟುಹಬ್ಬ ಇಂದು. ಇದೇ ಸಂದರ್ಭದಲ್ಲಿ ರಾಜ್ ಕುಟುಂಬದ ಮತ್ತೊಂದು ಕುಡಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದೆ.

ನಟ ರಾಘವೇಂದ್ರ ರಾಜಕುಮಾರ್ ಅವರ ಮತ್ತೊಬ್ಬ ಪುತ್ರ ಯುವರಾಜ್ ಕುಮಾರ್ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಯುವರಾಜ್ ಅಭಿನಯದ ಮೊದಲ ಚಿತ್ರದ ಫಸ್ಟ್ ಲುಕ್ ಇಂದು ಬಿಡುಗಡೆಯಾಗಿದೆ. ‘ವೈಆರ್ 1’ ಟೈಟಲ್ ನೊಂದಿಗೆ ಮಾಸ್ ಲುಕ್ ನಲ್ಲಿ ಯುವರಾಜ್ ಕಾಣಿಸಿಕೊಂಡಿದ್ದಾರೆ.

ಪುನೀತ್ ರುದ್ರನಾಗ್ ನಿರ್ದೇಶನದಲ್ಲಿ ಈ ಚಿತ್ರ ಮೂಡಿ ಬರಲಿದೆ. ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಅಣ್ಣಾವ್ರ ಹುಟ್ಟುಹಬ್ಬವನ್ನು ಅಭಿಮಾನಿಗಳು ಕಚೇರಿ, ಮನೆಗಳಲ್ಲೇ ಸರಳವಾಗಿ ಆಚರಿಸಿದ್ದಾರೆ. ಅಣ್ಣಾವ್ರ ಹುಟ್ಟುಹಬ್ಬದ ದಿನವೇ ಇವರ ಹೊಸ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿ ಗಮನ ಸೆಳೆದಿದೆ.

ಇಂದು ಅಪ್ಪಾಜಿ ಹುಟ್ಟುಹಬ್ಬ. ಇಂದೇ ಅವರ ಮೊಮ್ಮಗ ಯುವರಾಜ್ ಕುಮಾರ್ ಕಲಾವಿದನಾಗಿ ಚಿತ್ರರಂಗದಲ್ಲಿ ಹುಟ್ಟೋ ಹಬ್ಬ. ಹಾರ್ದಿಕ ಶುಭಾಶಯ ಎಂದು ಶಿವರಾಜಕುಮಾರ್ ಶುಭ ಹಾರೈಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...