ಮುಂಬೈ: ಕ್ರಿಕೆಟಿಗ ಯುವರಾಜ್ ಸಿಂಗ್ ಅವರ ತಂದೆ, ನಟ ಯೋಗರಾಜ್ ಸಿಂಗ್ ಮಹಿಳೆಯರ ಕುರಿತಾಗಿ ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಇದೀಗ ಅವರನ್ನು ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾದಿಂದ ಕೈಬಿಡಲಾಗಿದೆ.
ವಿವೇಕ್ ಅಗ್ನಿಹೋತ್ರಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದಲ್ಲಿ ಯೋಗರಾಜ್ ಸಿಂಗ್ ಡಿಜಿಪಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದರು. ಆದರೆ, ಯೋಗರಾಜ್ ಸಿಂಗ್ ಅವರು ಮಹಿಳೆಯರ ಬಗ್ಗೆ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಅವರನ್ನು ಚಿತ್ರದಿಂದ ತೆಗೆಯಲಾಗಿದೆ ಎಂದು ನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ.
‘ದಿ ಕಾಶ್ಮೀರ್ ಫೈಲ್ಸ್’ ಕಾಶ್ಮೀರದಲ್ಲಿ ನಡೆದ ಜನಾಂಗೀಯ ಹತ್ಯೆ ಕುರಿತಾದ ಚಿತ್ರವಾಗಿದೆ. ಯೋಗರಾಜ್ ಸಿಂಗ್ ಹಿಂದೂ ಮಹಿಳೆಯರ ಬಗ್ಗೆ ಮಾತನಾಡುತ್ತಾ, ಅಹ್ಮದ್ ಶಾ ದುರಾನಿಯಂಥವರು ಹಿಂದೂ ಮಹಿಳೆಯರನ್ನು ಅಪಹರಿಸಿ ಮಾರಾಟ ಮಾಡುವಾಗ ಸಿಖ್ ರು ಅವರನ್ನು ರಕ್ಷಿಸಿದೆವು ಎಂದು ಹೇಳಿಕೆ ನೀಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಯೋಗರಾಜ್ ಸಿಂಗ್ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಈ ವಿವಾದದ ಬೆನ್ನಲ್ಲೇ ಇದೀಗ ಯೋಗರಾಜ್ ಸಿಂಗ್ ಅವರನ್ನು ಕಾಶ್ಮೀರ್ ಫೈಲ್ಸ್ ಚಿತ್ರದಿಂದ ಕೈಬಿಡಲಾಗಿದೆ.