ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮನವಿಗೆ ಸ್ಪಂದಿಸಿದ ರಿಯಲ್ ಸ್ಟಾರ್ ಉಪೇಂದ್ರ ಆನೆ ದತ್ತು ಪಡೆದುಕೊಂಡಿದ್ದಾರೆ.
ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿರುವ ಆಫ್ರಿಕನ್ ಆನೆಯನ್ನು ದತ್ತು ಪಡೆದುಕೊಂಡಿರುವ ಉಪೇಂದ್ರ ಅವರಿಗೆ ದರ್ಶನ್ ಧನ್ಯವಾದ ಹೇಳಿದ್ದಾರೆ.
ಲಾಕ್ ಡೌನ್ ನಿಂದಾಗಿ ಮೃಗಾಲಯಗಳು ಬಂದ್ ಆಗಿ ನಿರ್ವಹಣೆ ಕಷ್ಟಸಾಧ್ಯವಾಗಿದ್ದರಿಂದ ಪ್ರಾಣಿಗಳನ್ನು ದತ್ತು ಪಡೆಯುವಂತೆ ದರ್ಶನ್ ಮಾಡಿದ ಮನವಿಗೆ ಭಾರೀ ಸ್ಪಂದನೆ ವ್ಯಕ್ತವಾಗಿದ್ದು, ಅವರ ಅಭಿಮಾನಿಗಳು, ಪ್ರಾಣಿ ಪ್ರಿಯರು ಹಲವಾರು ಪ್ರಾಣಿಗಳನ್ನು ದತ್ತು ಪಡೆದುಕೊಂಡಿದ್ದಾರೆ.