HomeKarnatakaಆದರ್ಶ ವಿದ್ಯಾಲಯದಲ್ಲಿ ಮಾ.23 ರಂದು 6 ನೇ ತರಗತಿ ಪ್ರವೇಶಾತಿಗೆ ಪ್ರವೇಶ ಪರೀಕ್ಷೆ, ಪೋಷಕರಿಗೆ ಇಲ್ಲಿದೆ...

ಆದರ್ಶ ವಿದ್ಯಾಲಯದಲ್ಲಿ ಮಾ.23 ರಂದು 6 ನೇ ತರಗತಿ ಪ್ರವೇಶಾತಿಗೆ ಪ್ರವೇಶ ಪರೀಕ್ಷೆ, ಪೋಷಕರಿಗೆ ಇಲ್ಲಿದೆ ಮಾಹಿತಿ

ಬಳ್ಳಾರಿ :   ನಗರದ ಹಿರಾಳ್ ಕುಡಂ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ 2026-27ನೇ ಸಾಲಿನಲ್ಲಿ 6ನೇ ತರಗತಿ ದಾಖಲಾತಿಗಾಗಿ ವಿದ್ಯಾರ್ಥಿಗಳಿಂದ ಈಗಾಗಲೇ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದ್ದು, ಪ್ರವೇಶ ಪರೀಕ್ಷೆ ಮಾ.15 ರಂದು ನಿಗದಿಯಾಗಿತ್ತು. ಬದಲಾಗಿ ಮಾ.22 ರಂದು ಭಾನುವಾರ ನಡೆಸಲು ನಿಗದಿಪಡಿಸಲಾಗಿದೆ ಎಂದು ಪ್ರಾಚಾರ್ಯರು ತಿಳಿಸಿದ್ದಾರೆ.

 ಸೆಂಟ್ ಜೋಸಫ್ ಬಾಲಕರ ಮತ್ತು ಬಾಲಕಿಯರ ಪ್ರೌಢಶಾಲೆ ಮತ್ತು ನಂದಿ ಪ್ರೌಢ ಶಾಲೆಗಳಲ್ಲಿ ಪ್ರವೇಶ ಪರೀಕ್ಷೆ ನಡೆಯಲಿವೆ. ಆನ್ ಲೈನ್‌ನಲ್ಲಿ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಂಡು ಹಾಜರಾಗಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಮೊ.9740738762 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಯಾದ ಪುಸ್ತಕಗಳ ಪ್ರಕಟ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2022ರಲ್ಲಿ ಪ್ರಥಮ ಮುದ್ರಣಗೊಂಡು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಯಾದ ಪುಸ್ತಕಗಳನ್ನು ಪ್ರಕಟಿಸಲಾಗಿದೆ ಎಂದು ಬಳ್ಳಾರಿ ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ತಿಳಿಸಿದ್ದಾರೆ.

2022ನೇ ವರ್ಷದಲ್ಲಿ ಪ್ರಥಮ ಮುದ್ರಣಗೊಂಡು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಸ್ವೀಕರಿಸಿದ ಪುಸ್ತಕಗಳನ್ನು ಆಯ್ಕೆ ಸಮಿತಿ ಮುಂದೆ ಮಂಡಿಸಲಾಗಿತ್ತು. ಆಯ್ಕೆ ಸಮಿತಿಯು ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳ್ಳಿಸಿದ್ದು, ಆಯ್ಕೆಯಾದ ಪುಸ್ತಕಗಳನ್ನು ಇಲಾಖೆಯ ಅಧಿಕೃತ ವೆಬ್ ಸೈಟ್ dpl.karnataka.gov.in ರಲ್ಲಿ ಪ್ರಕಟಿಸಲಾಗಿದೆ.

ಹಾಗಾಗಿ ಸಮಿತಿಯಿಂದ ಆಯ್ಕೆಯಾದ ಪುಸ್ತಕಗಳ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಾಶಕರು ಮತ್ತು ಪುಸ್ತಕ ಮಾರಾಟಗಾರರ ಪುಸ್ತಕಗಳಲ್ಲಿ ಶೀರ್ಷಕೆ, ಲೇಖಕರ ಹೆಸರು, ಪ್ರಕಾಶಕರ ಹೆಸರು, ಮುಖ ಬೆಲೆ ಮತ್ತು ನಿಗದಿತ ಬೆಲೆಯಲ್ಲಿ ಹೆಚ್ಚು ಅಥವಾ ಕಡಿಮೆಯಾಗಿದ್ದಲ್ಲಿ, ಪುಸ್ತಕದ ಅಳತೆ, ಪುಟ ಸಂಖ್ಯೆ ಹಾಗೂ ಇತರೆ ಯಾವುದೇ ತಾಂತ್ರಿಕ ವ್ಯತ್ಯಾಸಗಳಿದ್ದಲ್ಲಿ ಅಧಿಕೃತ ಮಾಹಿತಿ, ದಾಖಲಾತಿಗಳೊಂದಿಗೆ ಮಾ.16 ರ ಸಂಜೆ 5.30ರ ಒಳಗಾಗಿ ಅಯುಕ್ತರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ. ಅಂಬೇಡ್ಕರ್ ವೀಧಿ, ಬೆಂಗಳೂರು-560001 ಇವರಿಗೆ ಲಿಖಿತವಾಗಿ ಮನವಿಗಳನ್ನು ಸಲ್ಲಿಸಬಹುದು. ತದನಂತರ ಏಕಪಕ್ಷೀಯವಾಗಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular