ಶಿವಮೊಗ್ಗ : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ/ಕಾಲೇಜುಗಳಿಗೆ ಹಾಗೂ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಪ್ರಸಕ್ತ ಸಾಲಿನಲ್ಲಿ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕ/ಉಪನ್ಯಾಸಕರ ಹುದ್ದೆಗಳಿಗೆ ಜೂನ್ 01 ರಂದು ಪ್ರವೇಶ ಪರೀಕ್ಷೆ ನಡೆಯಲಿದೆ.
ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಜೂನ್ 01 ರಂದು ಬೆಳಗ್ಗೆ 11.00 ರಿಂದ ಮಧ್ಯಾಹ್ನ 1.00 ರವರೆಗೆ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆ/ಕಾಲೇಜು, ಮೇಲಿನ ಹನಸವಾಡಿ, ಗೋಂಧಿಚಟ್ನಹಳ್ಳಿ, ಹೊನ್ನಾಳಿ ರಸ್ತೆ, ಶಿವಮೊಗ್ಗ ಇಲ್ಲಿ ನಡೆಯುವ ಪ್ರವೇಶ ಪರೀಕ್ಷೆಗೆ ಜಿಲ್ಲಾ ಕಚೇರಿಯಲ್ಲಿ ಪ್ರವೇಶ ಪತ್ರ ಪಡೆದು ಸಮಯಕ್ಕೆ ಸರಿಯಾಗಿ ಹಾಜರಾಗುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
You Might Also Like
TAGGED:ವಸತಿ ಶಾಲೆ/ಕಾಲೇಜು