ಬಳ್ಳಾರಿ : ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳ 6ನೇ ತರಗತಿ ಪ್ರವೇಶಕ್ಕಾಗಿ ನಡೆಯಬೇಕಿದ್ದ ಅರ್ಹತಾ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಈ ಮೊದಲು ಮೇ 12 ರಂದು ನಿಗದಿಯಾಗಿದ್ದ ಪ್ರವೇಶ ಪರೀಕ್ಷೆಯನ್ನು ಈಗ ಮೇ 16 ರಂದು ನಡೆಸಲು ತೀರ್ಮಾನಿಸಲಾಗಿದೆ.
ಮೇ 16 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ನಗರದ ಹೆಡ್ ಪೋಸ್ಟ್ ಆಫೀಸ್ ಹತ್ತಿರದ ಸರ್ಕಾರಿ ಬಾಲಕಿಯರ ಜೂನಿಯರ್ ಕಾಲೇಜಿನಲ್ಲಿ ನಡೆಯಲಿದೆ.
ನಗರದ ಅಲ್ಲೀಪುರದ ವಿಶ್ವೇಶ್ವರಯ್ಯ ಪ್ರೌಢ ಶಾಲೆ(ಬೆಸ್ಟ್ ಸ್ಕೂಲ್), ವಿದ್ಯಾನಗರದ ನಂದ ವಸತಿ ಶಾಲೆ, ಬೆಳಗಲ್ ಕ್ರಾಸ್ ನ ಶ್ರೀ ನಂದಿ ಪ್ರೌಢಶಾಲೆ (ಸಿ.ಬಿ.ಎಸ್.ಇ) (ವಸತಿ ರಹಿತ), ಸಿರುಗುಪ್ಪದ ವಿಜಯಮೇರಿ ಪ್ರಾಥಮಿಕ ಶಾಲೆ (ವಸತಿ ಸಹಿತ), ದಮ್ಮೂರಿನ ಬೃಂದಾ ಇಂಟರ್ ನ್ಯಾಷನಲ್ ಸ್ಕೂಲ್(ವಸತಿ ಸಹಿತ) ಶಾಲೆಗಳಿಗೆ ಅರ್ಜಿ ಸಲ್ಲಿಸಿರುವ ಎಲ್ಲಾ ಅರ್ಹ ವಿದ್ಯಾರ್ಥಿಗಳು ನಿಗದಿತ ಸಮಯದಲ್ಲಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು-ಬಳ್ಳಾರಿ ಮೊ.8495026070, ಸಿರುಗುಪ್ಪ ಮೊ.9742581434 ಹಾಗೂ ಸಂಡೂರು ಮೊ.9448316710 ಗೆ ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿ ಅವಧಿ ಮೇ 18ರವರೆಗೆ ವಿಸ್ತರಣೆ
ಬಳ್ಳಾರಿ : 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಸುವ ಪ್ರಕ್ರಿಯೆಯ ಕಾಲಾವಧಿಯನ್ನು ಮೇ 18 ರ ವರೆಗೆ ವಿಸ್ತರಿಸಿ ರಾಜ್ಯ ಸರ್ಕಾರವು ಆದೇಶಿಸಿದೆ.
ಈ ಸೌಲಭ್ಯವು ಕೇವಲ ಈಗಾಗಲೇ ನೋಂದಾಯಿತರಾದ ರೈತರಿಗೆ ಮಾತ್ರ ಅನ್ವಯಿಸುತ್ತದೆ. ರೈತರು ಯಾವುದೇ ಮಧ್ಯವರ್ತಿಗಳ ಮೊರೆ ಹೋಗದೆ, ನೇರವಾಗಿ ಸರ್ಕಾರದ ಖರೀದಿ ಕೇಂದ್ರಗಳ ಮೂಲಕವೇ ತಮ್ಮ ಉತ್ಪನ್ನವನ್ನು ಮಾರಾಟ ಮಾಡಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು. ಉಳಿದಂತೆ ಖರೀದಿ ಪ್ರಕ್ರಿಯೆಯ ನಿಯಮಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
ಹೆಚ್ಚಿನ ಮಾಹಿತಿ ಅಥವಾ ವಿಚಾರಣೆಗಾಗಿ ರೈತರು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ, ಬಳ್ಳಾರಿ ಶಾಖೆ ಅಥವಾ ಮೊ.9449864453 ಗೆ ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಮಾರಾಟ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

