ವಿಶ್ವ ವಿಖ್ಯಾತ ಮೈಸೂರು ದಸರಾ ಹಿನ್ನೆಲೆ: ಅರಮನೆ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ದಸರಾ ಹಬ್ಬದ ಹಿನ್ನೆಲೆಯಲ್ಲಿ ರಾಜವಂಶಸ್ಥರು ಪೂಜಾ ಕಾರ್ಯ ನಡೆಸುವುದರಿಂದ ವಿವಿಧ ದಿನಗಳಂದು ಅರಮನೆ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

ಸೆ. 27ರಂದು ಸಿಂಹಾಸನ ಜೋಡಣೆ ಅಂಗವಾಗಿ ಬೆಳಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಅರಮನೆ ಪ್ರವೇಶಕ್ಕೆ ನಿರ್ಬಂಧ ಇರುತ್ತದೆ.

ಅ. 3ರಂದು ಖಾಸಗಿ ದರ್ಬಾರ್ ಪೂಜಾ ಕೈಂಕರ್ಯ ನಡೆಯುವುದರಿಂದ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ, ಅ. 11ರಂದು ಆಯುಧ ಪೂಜೆ, ಅ.12 ರಂದು ವಿಜಯದಶಮಿಯಂದು ಇಡೀ ದಿನ ಅರಮನೆ ಪ್ರವೇಶಕ್ಕೆ ನಿರ್ಬಂಧ ಇರಲಿದೆ.

ಅ. 27ರಂದು ಸಿಂಹಾಸನ ವಿಸರ್ಜನೆ ಅಂಗವಾಗಿ ಬೆಳಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಅರಮನೆಯ ಪ್ರವೇಶ ಇರುವುದಿಲ್ಲ ಎಂದು ಹೇಳಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read