ಬೆಂಗಳೂರು : ಹೊಸ ವರ್ಷಾಚರಣೆ ಹಿನ್ನೆಲೆ ಡಿ.31 ರಂದು ನಂದಿಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಡಿ.31 ರ ಮಧ್ಯಾಹ್ನ 2 ರಿಂದ ಜನವರಿ 1 ರ ಬೆಳಗ್ಗೆ 10 ಗಂಟೆವರೆಗೆ ಪ್ರವಾಸಿ ತಾಣ ಬಂದ್ ಆಗಿದೆ. ಅತಿಥಿ ಗೃಹ ಬುಕ್ ಮಾಡಿದವರನ್ನು ಹೊರತುಪಡಿಸಿ ಉಳಿದವರಿಗೆ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಆದೇಶ ಹೊರಡಿಸಿದ್ದಾರೆ. .ಯಾವುದೇ ಅಹಿತಕರ ಘಟನೆ ನಡೆಯದಂತೆ ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
ಡಿಸೆಂಬರ್ 31ರ ಮಧ್ಯಾಹ್ನ 2 ಗಂಟೆಯಿಂದ 2026 ಜನವರಿ 1 ರಂದು 10 ಗಂಟೆವರೆಗೂ ಸಾರ್ವಜನಿಕರು ಹಾಗೂ ಪ್ರವಾಸಿಗರ ಪ್ರವೇಶ ನಿರ್ಬಂಧ ಮಾಡಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ ಎನ್ ರವಿಂದ್ರ ಆದೇಶ ಹೊರಡಿಸಿದ್ದಾರೆ.
ನಂದಿಗಿರಿಧಾಮ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿರುವ ಒಂದು ಪ್ರಸಿದ್ಧ ಬೆಟ್ಟವಾಗಿದೆ, ಇದು ಸೂರ್ಯೋದಯ ವೀಕ್ಷಣೆ, ಚಾರಣ (trekking), ಐತಿಹಾಸಿಕ ಸ್ಥಳಗಳು (ಟಿಪ್ಪು ಡ್ರಾಗನ್ ಟನಲ್, ಬೆಟ್ಟದ ಮೇಲೆ ಕೋಟೆ) ಮತ್ತು ಪ್ರಕೃತಿ ಸೌಂದರ್ಯಕ್ಕೆ ಹೆಸರುವಾಸಿಯಾಗಿದೆ, ಕರ್ನಾಟಕದ ಜನಪ್ರಿಯ ಪ್ರವಾಸಿ ತಾಣಗಳಲ್ಲಿ ಒಂದಾಗಿದ್ದು ಬೆಂಗಳೂರಿಗರಿಗೆ ವಾರಾಂತ್ಯದ ಪ್ರವಾಸಕ್ಕೆ ಉತ್ತಮ ಆಯ್ಕೆಯಾಗಿದೆ.

