ಪಿಎಫ್ ಚಂದಾದಾರರಿಗೆ ಭರ್ಜರಿ ಸುದ್ದಿ: EPFO ನೌಕರರ ಭವಿಷ್ಯ ನಿಧಿ ಠೇವಣಿಗಳ ಮೇಲಿನ ಬಡ್ಡಿ ದರ ಶೇ. 8.25ಕ್ಕೆ ಹೆಚ್ಚಳ

ನವದೆಹಲಿ: ನೌಕರರ ಭವಿಷ್ಯ ನಿಧಿ ಸಂಸ್ಥೆ(The Employees’ Provident Fund Organisation -EPFO) 2023-24 ರ ಆರ್ಥಿಕ ವರ್ಷಕ್ಕೆ ಉದ್ಯೋಗಿಗಳ ಭವಿಷ್ಯ ನಿಧಿ ಠೇವಣಿಗಳ ಮೇಲೆ ಶೇ. 8.25ಕ್ಕೆ ಮೂರು ವರ್ಷಗಳ ಹೆಚ್ಚಿನ ಬಡ್ಡಿ ದರವನ್ನು ನಿಗದಿಪಡಿಸಿದೆ.

ನವದೆಹಲಿಯಲ್ಲಿ ನಡೆದ ಕೇಂದ್ರೀಯ ಟ್ರಸ್ಟಿಗಳ ಇಪಿಎಫ್‌ಒನ 235 ನೇ ಸಭೆಯಲ್ಲಿ ಇಪಿಎಫ್‌ಒದ ಉನ್ನತ ನಿರ್ಧಾರ ಸಂಸ್ಥೆ ಇಂದು ಈ ನಿರ್ಧಾರವನ್ನು ತೆಗೆದುಕೊಂಡಿದೆ. ಸಭೆಯ ಅಧ್ಯಕ್ಷತೆ ವಹಿಸಿದ್ದ ಕಾರ್ಮಿಕ ಮತ್ತು ಉದ್ಯೋಗ ಸಚಿವ ಭೂಪೇಂದರ್ ಯಾದವ್, ಭಾರತದ ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆಯನ್ನು ಬಲಪಡಿಸುವ ಪ್ರಧಾನಿ ನರೇಂದ್ರ ಮೋದಿ ಅವರ ಭರವಸೆಯನ್ನು ಈಡೇರಿಸುವತ್ತ ಈ ಕ್ರಮವು ಒಂದು ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.

2023 ರಲ್ಲಿ ಶೇಕಡ 8.15 ರಷ್ಟು, 2022ರಲ್ಲಿ ಶೇಕಡ 8.1 ರಷ್ಟು ಬಡ್ಡಿ ದರವನ್ನು ಪಿಎಫ್ ಚಂದಾದಾರರ ಖಾತೆಗೆ ಜಮಾ ಮಾಡಲಾಗಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read