BIG NEWS: 70 ಕೋಟಿ ವಂಚನೆ: EPFO ಸ್ಟಾಫ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸಿಇಒ ವಿರುದ್ಧ FIR ದಾಖಲು

ಬೆಂಗಳೂರು: ಇಪಿಎಫ್ ಒ ಸ್ಟಾಫ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ 70 ಕೋಟಿ ರೂಪಾಯಿ ವಂಚಿಸಿರುವ ಆರೋಪದಲ್ಲಿ ಸೊಸೈಟಿ ಸಿಇಓ ಸೇರಿ ಇಬ್ಬರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಬೆಂಗಳೂರಿನ ಇಪಿಎಫ್ ಓ ಕೋ-ಆಪರೇಟಿವ್ ಸೊಸೈಟಿಯಲ್ಲಿ ಸಿಬ್ಬಂದ್,, ನಿವೃತ್ತ ಸಿಬ್ಬಂದಿ ಲಕ್ಷ ಲಕ್ಷ ಹಣ ಎಫ್ ಡಿ ಇಟ್ಟಿದ್ದರು. ಪ್ರತಿ ತಿಂಗಳು ಎಫ್ ಡಿ ಹಣಕ್ಕೆ ಬಡ್ದಿ ಬರುತ್ತಿತ್ತು. ಕಳೆದ ಮೂರು ತಿಂಗಳಿಂದ ಬಡ್ಡಿ ಹಣ ಜಮೆಯಾಗಿಲ್ಲ. ಇದರಿಂದ ಅನುಮಾನಗೊಂಡ ಹೂಡಿಕೆದಾರರು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಸೊಸೈಟಿಯಲ್ಲಿ ಹಣ ಇಲ್ಲದಿರುವುದು ಬೆಳಕಿಗೆ ಬಂದಿದೆ.

73 ಕೋಟಿಯಲ್ಲಿ ಕೇವಲ 3 ಕೋಟಿ ಇರುವುದು ಪತ್ತೆಯಾಗಿದೆ. ಉಳಿದ ಹಣ ದುರ್ಬಳಕೆಯಾಗಿದೆ. ಈ ಹಿನ್ನೆಲೆಯಲ್ಲಿ ಸೊಸೈಟಿಯಲ್ಲಿ ಹಣ ಹೂಡಿಕೆ ಮಾಡಿದವರು ಸೊಸೈಟಿ ಸಿಇಒ ಗೋಇ, ಅಕೌಂಟೆಂಟ್ ಜಗದೀಶ್ ವಿರುದ್ಧ ದೂರು ನೀಡಿದ್ದಾರೆ.

ಮುರಳಿ ಎಂಬುವವರ ದೂರು ಆಧರಿಸಿ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಸಿಇಒ ಗೋಪಿ ಹಾಗೂ ಅಕೌಂಟೆಂಟ್ ಜಗದೀಶ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read