HomeKarnataka'ಕೇರಳ ಸ್ಟೋರಿ’ ಚಿತ್ರ ನೋಡಿದ್ರೆ ಸರ್ಕಾರ 'ಮತಾಂತರ ನಿಷೇಧ ಕಾಯ್ದೆ' ತಿದ್ದುಪಡಿ ಮಾಡಲ್ಲ : ಕೆ.ಎಸ್...

‘ಕೇರಳ ಸ್ಟೋರಿ’ ಚಿತ್ರ ನೋಡಿದ್ರೆ ಸರ್ಕಾರ ‘ಮತಾಂತರ ನಿಷೇಧ ಕಾಯ್ದೆ’ ತಿದ್ದುಪಡಿ ಮಾಡಲ್ಲ : ಕೆ.ಎಸ್ ಈಶ್ವರಪ್ಪ

ಬೆಂಗಳೂರು : ‘ಕೇರಳ ಸ್ಟೋರಿ’ ಚಿತ್ರ ನೋಡಿದ್ರೆ ಸರ್ಕಾರ ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ ಮಾಡಲ್ಲ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯತ್ತಿರುವ ಬಿಜೆಪಿ ಪ್ರತಿಭಟನೆ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ’ ಕಾಂಗ್ರೆಸ್ ಮಂತ್ರಿಗಳು ಬರಲಿ, ಬೇಕಿದ್ದರೆ ನಾವೇ ಕರೆದುಕೊಂಡು ಹೋಗಿ ಇಡೀ ಮಂತ್ರಿ ಮಂಡಲಕ್ಕೆ ಸಿನಿಮಾ ತೋರಿಸಿಕೊಂಡು ಬರುತ್ತೀವಿ. ಈ ಚಿತ್ರ ನೋಡಿದ್ರೆ ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ ಮಾಡಲ್ಲ ಎಂದರು.

ಗೋ ಹತ್ಯೆ ನಿಷೇಧ ಮಾಡಿದರೆ ಸರ್ಕಾರ ಉಳಿಯಲ್ಲ, ಗೋ ಹತ್ಯೆ ನಿಷೇಧ ಮಾಡಿ ನೋಡೋಣ ಎಂದು ಸವಾಲ್ ಹಾಕಿದ್ದಾರೆ. ಇನ್ನು ಮೂರು ತಿಂಗಳೂ ಸಿದ್ದರಾಮಯ್ಯ ಸರ್ಕಾರ ಉಳಿಯಲ್ಲ. ಮುಂದಿನ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ 28 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಕರ್ನಾಟಕ ರಾಜಕೀಯದಲ್ಲೂ ಮಹಾರಾಷ್ಟ ಸರ್ಕಾರದಂತೆ ತಲ್ಲಣ ಸೃಷ್ಟಿಯಾಗುತ್ತೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೊದಲ ಕ್ಯಾಬಿನೆಟ್ ನಲ್ಲೇ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಯೋಜನೆ ಜಾರಿ ಮಾಡಬೇಕಿತ್ತು . ಯೋಜನೆಗಳನ್ನು ಜಾರಿ ಮಾಡುವುದಾಗಿ ಹೇಳಿ ಸರ್ಕಾರ ಜನರಿಗೆ ಮೋಸ ಮಾಡಿದೆ. ಕೇವಲ ಒಂದು ಯೋಜನೆ ಮಾತ್ರ ಜಾರಿಗೆ ತಂದಿದೆ. ಮೊದಲ ಸಂಪುಟ ಸಭೆಯಲ್ಲೇ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವುದಾಗಿ ಹೇಳಿದ್ದ ಸರ್ಕಾರ ಜನರ ಕಣ್ಣಿಗೆ ಮಣ್ಣೆರಚಿದೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಾಗ್ಧಾಳಿ ನಡೆಸಿದ್ದಾರೆ. ಕೊಟ್ಟ ಮಾತಿನಂತೆ ಮೊದಲ ಸಂಪುಟದಲ್ಲೇ ಈಡೇರಿಸಬೇಕಿತ್ತು, ಗ್ಯಾರಂಟಿ ಹೆಸರಿನಲ್ಲಿ ಸರ್ಕಾರ ಜನರಿಗೆ ಮೋಸ ಮಾಡಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದರು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular