HomeKarnatakaಬಗರ್ ಹುಕುಂ ಸಾಗುವಳಿ ರೈತರಿಗೆ ಸಚಿವರಿಂದ ಗುಡ್ ನ್ಯೂಸ್

ಬಗರ್ ಹುಕುಂ ಸಾಗುವಳಿ ರೈತರಿಗೆ ಸಚಿವರಿಂದ ಗುಡ್ ನ್ಯೂಸ್

ಬೆಂಗಳೂರು: 15 ದಿನಗಳಲ್ಲಿ ಬಗರ್ ಹುಕುಂ ಹಾಗೂ ಶರಾವತಿ ರೈತರ ಸಮಸ್ಯೆ ಬಗೆಹರಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಭರವಸೆ ನೀಡಿದ್ದಾರೆ.

ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರ ವಿಧಾನಸೌಧದ ಕಚೇರಿಯಲ್ಲಿ ಈಶ್ವರ್ ಖಂಡ್ರೆ ಅವರೊಂದಿಗೆ ಶಿವಮೊಗ್ಗ ಜಿಲ್ಲೆಯ ಸಾಗರ, ಸೊರಬ, ಶಿಕಾರಿಪುರ, ಹೊಸನಗರ, ಶಿವಮೊಗ್ಗ, ತೀರ್ಥಹಳ್ಳಿ ಹಾಗೂ ಭದ್ರಾವತಿ ತಾಲ್ಲೂಕುಗಳ “ಅರಣ್ಯ ಭೂಮಿ ಒತ್ತುವರಿ, ಶರಾವತಿ ಮುಳುಗಡೆ ಪ್ರದೇಶದ ಸಂತ್ರಸ್ತರಿಗೆ ಪುನರ್ವಸತಿ ಸೇರಿದಂತೆ ರೈತರ ಅನೇಕ ಸಮಸ್ಯೆಗಳ ಕುರಿತು” ಸಮಗ್ರವಾಗಿ ಚರ್ಚಿಸಲಾಗಿದೆ.

ಪ್ರತಿನಿಧಿಗಳನ್ನು ಉದ್ದೇಶಿಸಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಾತನಾಡಿ, ಕಳೆದ ಐದು ದಶಕಗಳ ಸಮಸ್ಯೆ ಇದಾಗಿದ್ದು, ಚುನಾವಣಾ ಪೂರ್ವದಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೀಡಿದ ಆಶ್ವಾಸನೆಯಂತೆ ಶರಾವತಿ ಹಾಗೂ ಬಗರ್ ಹುಕುಂ ರೈತರ ಸಮಸ್ಯೆಗಳ ನಿವಾರಣೆ ನಮ್ಮ ಕರ್ತವ್ಯವಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈಗಾಗಲೇ ಯಾರನ್ನೂ ತೆರವುಗೊಳಿಸಿದಂತೆ ಜಿಲ್ಲೆಯಲ್ಲಿ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸೂಚಿಸಿದ್ದು, ಸುಪ್ರೀಂಕೋರ್ಟಿನಲ್ಲಿ ಐಎ ಸಲ್ಲಿಸಲಾಗಿದೆ. 15 ದಿನಗಳಲ್ಲಿ ಜಿಲ್ಲೆಯ ಬಗರ್ ಹುಕುಂ ಹಾಗೂ ಶರಾವತಿ ರೈತರ ಸಮಸ್ಯೆ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಮಧು ಬಂಗಾರಪ್ಪ ಅವರು, ಜಿಲ್ಲೆಯ ರೈತರ ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಕಾನೂನು ತಿದ್ದುಪಡಿ ಅವಶ್ಯಕತೆ ಇದ್ದು, ಈ ನಿಟ್ಟಿನಲ್ಲಿ ತುರ್ತು ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಹೋರಾಟ ಸಮಿತಿಯ ಮುಖಂಡರಾದ ಬಿ.ಎ. ರಮೇಶ್ ಹೆಗಡೆ, ಜಿ.ಡಿ. ಮಂಜುನಾಥ್,   ನಗರದ ಮಹದೇವಪ್ಪ, ಎಂ.ಪಿ. ಧರ್ಮರಾಜ್, ಗಣಪತಿ ಹುಲ್ತಿಕೊಪ್ಪ, ಶ್ರೀನಿವಾಸ್, ಸಿಗಂದೂರ್ ರವಿ, ಕೆರೆಹಳ್ಳಿ ರಾಮಪ್ಪ, ಶ್ರೀನಿವಾಸ್ ಕರಿಯಣ್ಣ, ಸಂತೆಕಡೂರ್ ವಿಜಯಕುಮಾರ್, ಶಾಂತವೀರ ನಾಯ್ಕ್, ರಾಘವೇಂದ್ರ, ರಾಜಪ್ಪ ಕಟ್ಟಿಗೆಹಳ್ಳಿ, ರಘುಪತಿ ಹಾಗೂ ಜಿಲ್ಲೆಯ ಎಲ್ಲ ತಾಲೂಕಿನ ಜನಪ್ರತಿನಿಧಿಗಳು, ಮುಖಂಡರು ಹಾಗೂ ಅರಣ್ಯ ಹಕ್ಕು ಹೋರಾಟಗಾರರು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular