ಬಗರ್ ಹುಕುಂ ಸಾಗುವಳಿದಾರರಿಗೆ ʼಗುಡ್ ನ್ಯೂಸ್ʼ

ದಾವಣಗೆರೆ: ಬಗರ್ ಹುಕುಂ ಸಾಗುವಳಿ ಅರ್ಜಿಗಳನ್ನು ಶೀಘ್ರವೇ ಇತ್ಯರ್ಥಪಡಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಗರ್ ಹುಕುಂ ಸಾಗುವಳಿಗೆ ಸಂಬಂಧಿಸಿದಂತೆ ಬಾಕಿ ಇರುವ ಅರ್ಜಿಗಳನ್ನು ಇತ್ಯರ್ಥಪಡಿಸಿ ಕಾಲಮಿತಿ ಒಳಗೆ ನ್ಯಾಯ ಒದಗಿಸುವುದಾಗಿ ಹೇಳಿದ್ದಾರೆ.

ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಈಗಾಗಲೇ ಸುತ್ತೋಲೆ ಕಳುಹಿಸಿದ್ದು, ಬಗರ್ ಹುಕುಂ ಸಮಿತಿ ರಚನೆಯಾಗುತ್ತಿವೆ ಎಂದು ಹೇಳಿದ್ದಾರೆ.

ಸಮಾಜದಲ್ಲಿ ಸಾಮರಸ್ಯ ತರಬೇಕೆಂಬ ಕಾರಣಕ್ಕೆ ಮಾತಾಂತರ ನಿಷೇಧ ಕಾಯ್ದೆ ಹಿಂಪಡೆಯುತ್ತಿದ್ದೇವೆ. ಬಿಜೆಪಿಯವರು ಜಾತಿ, ಧರ್ಮಗಳ ಮಧ್ಯೆ ವಿಷ ಬೀಜ ಬಿತ್ತಿ ಭಾವನಾತ್ಮಕವಾಗಿ ಕೆರಳಿಸಿ ಸಮಾಜ ಒಡೆಯಲು ಯತ್ನಿಸಿದ್ದರು ಎಂದು ಟೀಕಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read