HomeKarnatakaರಾಜ್ಯದಲ್ಲಿ ಆನೆ ದಾಳಿ ತಡೆಗೆ ಮಹತ್ವದ ಕ್ರಮ: 2 ಸಾವಿರ ಹೆಕ್ಟೇರ್ ನಲ್ಲಿ 'ವಿಹಾರಧಾಮ' ನಿರ್ಮಾಣ

ರಾಜ್ಯದಲ್ಲಿ ಆನೆ ದಾಳಿ ತಡೆಗೆ ಮಹತ್ವದ ಕ್ರಮ: 2 ಸಾವಿರ ಹೆಕ್ಟೇರ್ ನಲ್ಲಿ ‘ವಿಹಾರಧಾಮ’ ನಿರ್ಮಾಣ

ಬೆಳಗಾವಿ(ಸುವರ್ಣಸೌಧ): ರಾಜ್ಯದಲ್ಲಿ ಆನೆ ಹಾವಳಿ ತಡೆಗೆ ಕೊಡಗು, ಹಾಸನ ಜಿಲ್ಲೆಗಳ ವ್ಯಾಪ್ತಿಯಲ್ಲಿ 2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಆನೆಗಳ ವಿಹಾರಧಾಮ ಸ್ಥಾಪಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಬೇಲೂರು ಜೆಡಿಎಸ್ ಶಾಸಕ ಹೆಚ್.ಕೆ. ಸುರೇಶ್ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಆನೆ ದಾಳಿ ತಡೆಗೆ ಸೋಲಾರ್ ಬೇಲಿ ಅಳವಡಿಕೆ, ಆನೆ ಕಂದಕ ನಿರ್ಮಾಣದಂತಹ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದರೊಂದಿಗೆ ಕೊಡಗು, ಹಾಸನ ವ್ಯಾಪ್ತಿಯಲ್ಲಿ 2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಆನೆಗಳ ವಿಹಾರಧಾಮ ನಿರ್ಮಿಸಲಾಗುವುದು. ಎಲ್ಲೇ ಆನೆಗಳನ್ನು ಸೆರೆಹಿಡಿದರೂ ಅಲ್ಲಿಗೆ ತಂದು ಬಿಡಲಾಗುತ್ತದೆ. ಇದರಿಂದ ಆನೆಗಳು ಜನವಸತಿ ಪ್ರದೇಶಕ್ಕೆ ಬರುವುದು ಕಡಿಮೆಯಾಗುತ್ತದೆ ಎಂದು ಹೇಳಿದ್ದಾರೆ.

ಪ್ರಾಣಿಗಳ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ನೀಡುವ ಪರಿಹಾರವನ್ನು 7.5 ಲಕ್ಷ ರೂ.ನಿಂದ 15 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular