HomeKarnatakaಹಕ್ಕು ಪತ್ರ ನಿರೀಕ್ಷೆಯಲ್ಲಿದ್ದ ರಾಜ್ಯದ ಜನತೆಗೆ ಗುಡ್ ನ್ಯೂಸ್: ಮೂರು ತಿಂಗಳಲ್ಲಿ ಹಕ್ಕುಪತ್ರ ವಿತರಣೆ; ಸಚಿವ...

ಹಕ್ಕು ಪತ್ರ ನಿರೀಕ್ಷೆಯಲ್ಲಿದ್ದ ರಾಜ್ಯದ ಜನತೆಗೆ ಗುಡ್ ನ್ಯೂಸ್: ಮೂರು ತಿಂಗಳಲ್ಲಿ ಹಕ್ಕುಪತ್ರ ವಿತರಣೆ; ಸಚಿವ ಖಂಡ್ರೆ ಘೋಷಣೆ

ಮೈಸೂರು: ಇನ್ನು ಮೂರು ತಿಂಗಳಲ್ಲಿ ಅರಣ್ಯದಂಚಿನಲ್ಲಿ ವಾಸಿಸುತ್ತಿರುವ 10,000 ಜನರಿಗೆ ಹಕ್ಕುಪತ್ರ ವಿತರಿಸುವುದಾಗಿ ಅರಣ್ಯ ಸಚಿವ ಈಶ್ವರ ಖಂಡ್ರೆ ಘೋಷಿಸಿದ್ದಾರೆ.

ಮೈಸೂರಿನಲ್ಲಿ ಅರಣ್ಯ ಇಲಾಖೆಯಿಂದ ಏರ್ಪಡಿಸಿದ್ದ 69ನೇ ವನ್ಯಜೀವಿ ಸಪ್ತಾಹದಲ್ಲಿ ಮಾತನಾಡಿದ ಅವರು, ಅನೇಕ ವರ್ಷಗಳಿಂದ ಕಾಡಂಚಿನ ಜನರಿಗೆ ಹಕ್ಕು ಪತ್ರ ಸಿಗದೆ ತೊಂದರೆಯಲ್ಲಿದ್ದಾರೆ. ಇದನ್ನು ಮನಗಂಡು ಹಕ್ಕು ಪತ್ರ ವಿತರಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಹಕ್ಕುಪತ್ರ ವಿತರಿಸಲು ಕ್ರಮ ಕೈಗೊಂಡಿದ್ದರು. ನಂತರ ಬಂದವರು ಹಕ್ಕುಪತ್ರ ವಿತರಿಸಲು ಮುಂದಾಗಲಿಲ್ಲ. ಈಗ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿದ್ದು, ಮುಂದಿನ ಮೂರು ತಿಂಗಳಲ್ಲಿ ಕಾಡಿನಂಚಿನ 10,000 ಜನರಿಗೆ ಆದ್ಯತೆ ಮೇರೆಗೆ ಹಕ್ಕುಪತ್ರ ವಿತರಿಸುವುದಾಗಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular