HomeKarnatakaBIG NEWS: ಕಲ್ಯಾಣ ಕರ್ನಾಟಕ ಸೇರಿ ಅರಣ್ಯ ವ್ಯಾಪ್ತಿ ಕಡಿಮೆ ಇರುವ 16 ಜಿಲ್ಲೆಗಳಲ್ಲಿ ಅರಣ್ಯ...

BIG NEWS: ಕಲ್ಯಾಣ ಕರ್ನಾಟಕ ಸೇರಿ ಅರಣ್ಯ ವ್ಯಾಪ್ತಿ ಕಡಿಮೆ ಇರುವ 16 ಜಿಲ್ಲೆಗಳಲ್ಲಿ ಅರಣ್ಯ ಬೆಳೆಸಲು ವಿಶೇಷ ಯೋಜನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಸೇರಿದಂತೆ ಹಸಿರು ಹೊದಿಕೆ ಕಡಿಮೆ ಇರುವ 16 ಜಿಲ್ಲೆಗಳಲ್ಲಿ ಅರಣ್ಯ ಬೆಳೆಸಲು ವಿಶೇಷ ಯೋಜನೆ ಸಿದ್ಧಪಡಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.

ವಿಕಾಸಸೌಧದಲ್ಲಿ ಶುಕ್ರವಾರ ಸಭೆ ನಡೆಸಿದ ಸಚಿವರು ವಿಜಯಪುರ, ರಾಯಚೂರು, ಯಾದಗಿರಿ, ಬಳ್ಳಾರಿ, ಕಲಬುರಗಿ ಸೇರಿದಂತೆ ಹಸಿರು ವ್ಯಾಪ್ತಿ ಕಡಿಮೆ ಇರುವ ಜಿಲ್ಲೆಗಳಲ್ಲಿ ಎತ್ತರದ ಸಸಿ ಬೆಳೆಸಿ ನೀರುಣಿಸಿ ಜಿಯೋ ಟ್ಯಾಗ್ ಮಾಡಿ ಸಂರಕ್ಷಿಸುವಂತೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಕಲ್ಯಾಣ ಕರ್ನಾಟಕ ಸೇರಿ ಅರಣ್ಯ ವ್ಯಾಪ್ತಿ ಕಡಿಮೆ ಇರುವ 16 ಜಿಲ್ಲೆಗಳಿಗೆ ವಿಶೇಷ ಯೋಜನೆ ಸಿದ್ಧಪಡಿಸಬೇಕು. ಎತ್ತರದ ಸಸಿಗಳನ್ನು ಹೆಚ್ಚಾಗಿ ನೆಟ್ಟು ಅವುಗಳು ಒಣಗದಂತೆ ನಿರ್ವಹಿಸಬೇಕು. ಪ್ರತಿ ಸಸಿಗೂ ಜಿಯೋ ಟ್ಯಾಗ್ ಮಾಡಿ ಸಂರಕ್ಷಿಸಬೇಕು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular