HomeAgricultureರೈತರಿಗೆ ಸಿಹಿ ಸುದ್ದಿ: 3 ಎಕರೆಗಿಂತ ಕಡಿಮೆ ಜಮೀನು ಸಾಗುವಳಿದಾರರ ಒಕ್ಕಲೆಬ್ಬಿಸುವುದಿಲ್ಲ: ಸಚಿವ ಖಂಡ್ರೆ ಮಾಹಿತಿ

ರೈತರಿಗೆ ಸಿಹಿ ಸುದ್ದಿ: 3 ಎಕರೆಗಿಂತ ಕಡಿಮೆ ಜಮೀನು ಸಾಗುವಳಿದಾರರ ಒಕ್ಕಲೆಬ್ಬಿಸುವುದಿಲ್ಲ: ಸಚಿವ ಖಂಡ್ರೆ ಮಾಹಿತಿ

ಮೈಸೂರು: ಅರಣ್ಯ ಸಂರಕ್ಷಣಾ ಕಾಯ್ದೆ ಜಾರಿಗೆ ಬರುವ ಮೊದಲು ಅರಣ್ಯ ಭೂಮಿಯಲ್ಲಿ ಮೂರು ಎಕರೆಗಿಂತ ಕಡಿಮೆ ಪ್ರದೇಶದಲ್ಲಿ ಸಾಗುವಳಿ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಭರವಸೆ ನೀಡಿದ್ದಾರೆ.

ತಮ್ಮನ್ನು ಭೇಟಿಯಾದ ಅಖಂಡ ಕರ್ನಾಟಕ ರೈತ ಒಕ್ಕೂಟದ ಸದಸ್ಯರಿಂದ ಮನವಿ ಸ್ವೀಕರಿಸಿದ ಸಚಿವರು ಮಾತನಾಡಿ, ಕೆಲವರು ಸ್ವಾರ್ಥಕ್ಕಾಗಿ ಹತ್ತಾರು ಎಕರೆ ಅರಣ್ಯ ಪ್ರದೇಶ ಒತ್ತುವರಿ ಮಾಡಿಕೊಂಡಿದ್ದು, ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ಪ್ರಕೃತಿ ಪರಿಸರ ಉಳಿದರೆ ಮಾತ್ರವೇ ನಾವು ಉಳಿಯಲು ಸಾಧ್ಯ. ಅರಣ್ಯ ಭೂಮಿ ಕಡಿಮೆಯಾದರೆ ಮಾನವ ವನ್ಯಜೀವಿ ಸಂಘರ್ಷ ಹೆಚ್ಚಾಗುತ್ತದೆ. ಅರಣ್ಯ ಸಂರಕ್ಷಣೆ ನಮ್ಮ ಕರ್ತವ್ಯ ಕೂಡ ಆಗಿದೆ. ಅರಣ್ಯ ಸಂರಕ್ಷಣಾ ಕಾಯ್ದೆ ಜಾರಿಗೆ ಮುನ್ನ ಅರಣ್ಯ ಭೂಮಿಯಲ್ಲಿ ಮೂರು ಎಕರೆಗಿಂತ ಕಡಿಮೆ ಪ್ರದೇಶದಲ್ಲಿ ಸಾಗುವಳಿ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular