HomeKarnatakaಜಾತಿ ಗಣತಿಗೆ ವಿರೋಧವಿಲ್ಲ, ಅನುಮಾನ ಇದೆ: ಹೊಸ ಗಣತಿಗೆ ಸಿಎಂಗೆ ಮನವಿ: ಸಚಿವ ಖಂಡ್ರೆ ಮಾಹಿತಿ

ಜಾತಿ ಗಣತಿಗೆ ವಿರೋಧವಿಲ್ಲ, ಅನುಮಾನ ಇದೆ: ಹೊಸ ಗಣತಿಗೆ ಸಿಎಂಗೆ ಮನವಿ: ಸಚಿವ ಖಂಡ್ರೆ ಮಾಹಿತಿ

ಬೆಂಗಳೂರು: ಜಾತಿ ಗಣತಿಗೆ ವಿರೋಧವಿಲ್ಲ, ಗಣತಿ ಬಗ್ಗೆ ಅನುಮಾನ ಇದ್ದು, ಹೊಸದಾಗಿ ಜಾತಿ ಗಣತಿ ನಡೆಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ನಡೆದ ಗಣತಿ ವೇಳೆ ಎಲ್ಲರ ಮನೆಗೆ ಹೋಗಿಲ್ಲ, ಸರಿಯಾಗಿ ಸಮೀಕ್ಷೆ ನಡೆದಿಲ್ಲ ಎಂಬ ದೂರುಗಳಿವೆ. 7 ವರ್ಷದ ಹಿಂದೆ ನಡೆದ ಗಣತಿ ಬಗ್ಗೆ ನಮ್ಮ ಅನುಮಾನವಿದ್ದು, ಹೊಸದಾಗಿ ಜಾತಿ ಗಣತಿ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಮಾಡಿರುವುದಾಗಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಹುಲ್ ಗಾಂಧಿ, ಸಿದ್ದರಾಮಯ್ಯ ಅವರು ಜಾತಿ ಗಣತಿ ನಡೆಯಬೇಕು. ಅವಕಾಶ ವಂಚಿತರಿಗೆ ಹೆಚ್ಚಿನ ಅನುಕೂಲ ಸಿಗಬೇಕು ಎಂದು ಹೇಳಿದ್ದಾರೆ. ಆದರೆ, 7 ವರ್ಷಗಳ ಹಿಂದೆ ನಡೆದ ಗಣತಿ ಬಗ್ಗೆ ಅನುಮಾನ ಇದೆ. ಕೆಲವರು ಸರ್ಕಾರಿ ಸೌಲಭ್ಯಕ್ಕಾಗಿ ಜಾತಿ ಬಳಕೆ ಮಾಡುತ್ತಿದ್ದಾರೆ. ನಡೆದಿರುವ ಜಾತಿಗಣತಿಯ ಕುರಿತಾದ ಅನುಮಾನಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ತಿಳಿಸಿದ್ದು, ಅವರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular