ಬೆಂಗಳೂರು: ಅರಣ್ಯ ಇಲಾಖೆಯಲ್ಲಿ ಮುಂಚೂಣಿ ಸಿಬ್ಬಂದಿ ಕೊರತೆ ನೀಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಮಾತನಾಡಿದ ಸಚಿವರು, ಈಗಾಗಲೇ 310 ಅರಣ್ಯ ವೀಕ್ಷಕರ ನೇಮಕಾತಿ ಮಾಡಲಾಗಿದೆ. ಈಗ 540 ಅರಣ್ಯ ರಕ್ಷಕರ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು.
ಕಾಡಾನೆ ದಾಳಿ, ಹುಲಿ ದಾಳಿ ಸೇರಿದಂತೆ ವನ್ಯಜೀವಿಗಳ ದಾಳಿಯಿಂದ ಮೃತಪಟ್ಟವರಿಗೆ ಪ್ರಸ್ತುತ 20 ಲಕ್ಷ ಪರಿಹಾರ ನೀಡಲಾಗುತ್ತಿದೆ. ಹಾವುಕಚ್ಚಿ ಮೃತಪಟ್ಟವರಿಗೆ ಕೃಷಿ ಇಲಾಖೆ ವತಿಯಿಂದ 2 ಲಕ್ಷ ಪರಿಹಾರ ಒದಗಿಸಲಾಗುತ್ತಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಸರ್ಕಾರ ಮಾನವ-ವನ್ಯಜೀವಿ ಸಂಘರಷಗಳನ್ನು ತಡೆಯಲು ಕ್ರಮ ಕೈಗೊಂಡಿದೆ. ದಕ್ಷಿಣ ಕನ್ನಡಕ್ಕೆ ಪ್ರತ್ಯೇಕವಗೈ ಆನೆ ಕಾರ್ಯಪಡೆ ಮಂಜೂರು ಮಾಡಲು ಸೂಚಿಸಲಾಗಿದೆ. 2-3 ದಿನಗಳಲ್ಲಿ ಅಧಿಕೃತವಾಗಿ ಪ್ರಕಟವಾಗಲಿದೆ. ಈ ಕಾರ್ಯಪಡೆಯಲ್ಲಿ 32 ಸಿಬ್ಬಂದಿಗಳು ಇರಲಿದ್ದಾರೆ ಎಂದು ಹೇಳಿದರು.