HomeLatest NewsBIG NEWS: ಹಳೆಯ ಬಾಟಲಿಯಲ್ಲಿ ಹೊಸ ದ್ರಾಕ್ಷಾರಸ ತುಂಬಿದಂತಿದೆ: ಕೇಂದ್ರ ಬಜೆಟ್ ಬಗ್ಗೆ ಸಚಿವ ಈಶ್ವರ...

BIG NEWS: ಹಳೆಯ ಬಾಟಲಿಯಲ್ಲಿ ಹೊಸ ದ್ರಾಕ್ಷಾರಸ ತುಂಬಿದಂತಿದೆ: ಕೇಂದ್ರ ಬಜೆಟ್ ಬಗ್ಗೆ ಸಚಿವ ಈಶ್ವರ ಖಂಡ್ರೆ ಪ್ರತಿಕ್ರಿಯೆ

ಬೆಂಗಳೂರು: ಕೇಂದ್ರ ಬಜೆಟ್ ಸಂಪೂರ್ಣ ನಿರಾಶಾದಾಯವಾಗಿದೆ. ಹೆಚ್ಚು ತೆರಿಗೆ ಪಾವತಿಸುವ ರಾಜ್ಯಕ್ಕೆ ಮತ್ತೆ ಅನ್ಯಾಯವಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಭಾನುವಾರ ಮಂಡಿಸಲಾದ ಕೇಂದ್ರ ಬಜೆಟ್ ದೇಶದ ಆರ್ಥಿಕತೆಗೆ ರಜೆ ನೀಡುವಂತಿದೆ. ನಿರ್ಮಲಾ ಸೀತಾರಾಮನ್ ಮಂಡಿಸಿದ 9ನೇ ಬಜೆಟ್ ನಲ್ಲಿ ಯಾವುದೇ ಗಣನೀಯ ಸುಧಾರಣೆ ಆಗಿಲ್ಲ. ಸರ್ಕಾರಿ ವೆಚ್ಚಗಳ ಮೇಲೆ ಯಾವುದೇ ನಿಯಂತ್ರಣವೂ ಇಲ್ಲ. ಕರ್ನಾಟಕಕ್ಕಂತೂ ಹೇಳಿಕೊಳ್ಳುವಂತಹ ಪ್ರಯೋಜನ ಈ ಬಜೆಟ್ ನಲ್ಲಿ ಇಲ್ಲ ಎಂದರು.

ಹೈದ್ರಾಬಾದ್ – ಬೆಂಗಳೂರು ಹೈಸ್ಪೀಡ್ ರೈಲು ಸಮಾಧಾನಕರ ಬಹುಮಾನದಂತಿದೆ. ರೈತರು ಬೆಳೆಯುವ ಎಲ್ಲ ಬೆಳೆಗಳಿಗೂ ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆ (ಎಂ.ಎಸ್.ಪಿ.) ನೀಡುವಲ್ಲಿ ಈ ಬಾರಿಯೂ ವಿಫಲವಾಗಿದೆ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೇಂದ್ರ ಸರ್ಕಾರ ಈ ಬಾರಿಯ ಬಜೆಟ್ ನಲ್ಲಿ ಶ್ರೀಗಂಧ ಬೆಳೆಗೆ ಉತ್ತೇಜನ ನಿಡುವುದಾಗಿ ಹೇಳಿದೆ. ಆದರೆ ಅದು ಹೇಗೆ ಕಾರ್ಯಗತವಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ಸ್ವಾಭಾವಿಕವಾಗಿ ಬೆಳೆಯುವ ಶ್ರೀಗಂಧದಲ್ಲಿ ತೈಲದ ಅಂಶ ಇರುತ್ತದೆ. ಆದರೆ ರೈತರು ಜಮೀನಿನಲ್ಲಿ ಗೊಬ್ಬರ ಹಾಕಿ ಬೆಳೆಯುವ ಶ್ರೀಗಂಧಕ್ಕೆ ಹೆಚ್ಚಿನ ಬೆಲೆ ದೊರಕುವುದಿಲ್ಲ. ಇದರಿಂದ ಮುಂದಿನ ದಿನಗಳಲ್ಲಿ ರೈತರು ಸಂಕಷ್ಟ ಅನುಭವಿಸುತ್ತಾರೆ ಎಂದು ತಿಳಿಸಿದರು.

ರಾಜ್ಯ ಸರ್ಕಾರ ಈಗಾಗಲೇ ನೂತನ ಶ್ರೀಗಂಧದ ನೀತಿ ರಚಿಸಿದೆ. ಕಡಲ ಆಮೆಗಳ ಸಂರಕ್ಷಣೆಯನ್ನು ಪ್ರವಾಸೋದ್ಯಮದಲ್ಲಿ ಸೇರಿಸಲಾಗಿದೆ. ಕರ್ನಾಟಕದ ಮಂಗಳೂರು ಮತ್ತು ಕಾರವಾರದಲ್ಲಿ ಈಗಾಗಲೇ ರಾಜ್ಯ ಸರ್ಕಾರ ಕಡಲಾಮೆಗಳ ಮೊಟ್ಟೆಗಳ ಸಂರಕ್ಷಣೆ ಮತ್ತು ಮರಿಗಳ ರಕ್ಷಣೆಗೆ ಕ್ರಮ ಕೈಗೊಂಡಿದೆ. ರಾಜ್ಯ ಸರ್ಕಾರ ಈಗಾಗಲೇ ಈ ಯೋಜನೆಗೆ ಮಾದರಿಯಾಗಿದೆ ಎಂದರು.

ಕಳೆದ 12 ವರ್ಷಗಳಲ್ಲಿ ದೇಶದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಳವಾಗಿದೆ. ವರ್ಷಕ್ಕೆ 2 ಕೋಟಿ ಉದ್ಯೋಗದ ಭರವಸೆ ನೀಡಿದ್ದ ಕೇಂದ್ರ ಸರ್ಕಾರ ನುಡಿದಂತೆ ನಡೆಯುವಲ್ಲಿ ಸಂಪೂರ್ಣ ವಿಫಲವಾಗಿದೆ. ಈ ಬಜೆಟ್ ನಲ್ಲಿಯೂ ರಾಜ್ಯದಲ್ಲಿ ಯುವಜನರಿಗೆ ಉದ್ಯೋಗ ಸೃಷ್ಟಿಸುವಂತಹ ಯಾವುದೇ ಯೋಜನೆ ಕಾಣುತ್ತಿಲ್ಲ. ಕೇಂದ್ರದ ಈಬಾರಿಯ ಬಜೆಟ್ ಹಳೆಯ ಬಾಟಲಿಯಲ್ಲಿ ಹೊಸ ದ್ರಾಕ್ಷಾರಸ ತುಂಬಿದಂತಿದೆ ಎಂದು ಟೀಕಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular