HomeKarnataka2028ರ ಚುನಾವಣೆಯಲ್ಲಿ ಸ್ಪರ್ಧೆ ಖಚಿತ: ಕೆ.ಎಸ್.ಈಶ್ವರಪ್ಪ ಘೋಷಣೆ

2028ರ ಚುನಾವಣೆಯಲ್ಲಿ ಸ್ಪರ್ಧೆ ಖಚಿತ: ಕೆ.ಎಸ್.ಈಶ್ವರಪ್ಪ ಘೋಷಣೆ

ಶಿವಮೊಗ್ಗ: ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಘೋಷಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಖಚಿತ. ಶಿವಮೊಗ್ಗ ನಗರ ಕ್ಷೇತ್ರದಿಂದ ನಾನು ಅಥವಾ ನಮ್ಮ ಮಗ ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಲ್ಲರ ಅಭಿಪ್ರಾಯ ಪಡೆದು ತೀರ್ಮಾನ ಮಾಡುತ್ತೇನೆ. ಬಿಜೆಪಿ ಪ್ರಮುಖರು ನಮ್ಮ ಸಂಪರ್ಕದಲ್ಲಿದ್ದಾರೆ. ಬಿಜೆಪಿಗೆ ಹೋಗಬೇಕೋ ಬೇಡವೋ ಮುಂದೆ ತೀರ್ಮಾನ ಮಾಡುತ್ತೇನೆ ಎಂದರು. ಬಿಜೆಪಿಯಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಈಗ ಬಿಜೆಪಿ ಚುನಾವಣೆಗೆ ಹೋದರೆ ಹೆಚ್ಚು ಸ್ಥಾನ ಗೆಲ್ಲಲ್ಲ. ಬಿಜೆಪಿಯಲ್ಲಿ ಇನ್ನೂ ಹೆಚ್ಚಿನ ಪಕ್ಷ ಸಂಘಟನೆಯಾಗಬೇಕು ಎಂದು ಹೇಳಿದರು.

ಬಿಎಸ್ ವೈ ಕುಟುಂಬದ ಇಬ್ಬರಿಗೆ ಅವಕಾಶ ಸಿಕ್ಕಿದೆ. ಬಿ.ವೈ.ರಾಘವೇಂದ್ರ ಹಾಗೂ ವಿಜಯೇಂದ್ರ ಇಬ್ಬರಿಗೂ ಅವಕಾಶ ಸಿಕ್ಕಿದೆ. ಬೊಮ್ಮಾಯಿ ಪುತ್ರ, ಶೆಟ್ಟರ್ ಸಹೋದರನಿಗೂ ಅವಕಾಶ ಸಿಕ್ಕಿದೆ. ಆದರೆ ನನ್ನ ಮಗನಿಗೆ ಟಿಕೆಟ್ ನೀಡದೇ ಅನ್ಯಾಯ ಮಾಡಿದರು. ಈ ಬಗ್ಗೆ ನನಗೆ ಈಗಲೂ ಬೇಸರವಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದೇ ವೇಳೆ ಮಾತನಾಡಿದ ಕೆ.ಎಸ್.ಈಶ್ವರಪ್ಪ ಪುತ್ರ ಕಾಂತೇಶ್, ರಾಷ್ಟ್ರಭಕ್ತ ಬಳಗದಿಂದ ಮುಂಬರುವ ವಿಧಾನಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಲಾಗಿದ್ದು, ಎಲೆಕ್ಷನ್​ ಎದುರಿಸಲು ಈಶ್ವರಪ್ಪ ನೇತೃತ್ವದ ರಾಷ್ಟ್ರ ಬಳಗ ರೆಡಿ ಆಗಿದೆ ಎಂದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ಗೆಲುವಿನಲ್ಲಿ ಈಶ್ವರಪ್ಪ ಬೆಂಬಲಿಗರು ಪ್ರಮುಖ ಪಾತ್ರ ವಹಿಸಿದ್ದರು. ಹೀಗಾಗಿ ಶಿವಮೊಗ್ಗ ನಗರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಗೆಲುವು ಸುಲಭವಾಗಿತ್ತು. ಈ ಹಿನ್ನಲೆಯಲ್ಲಿ ರಾಷ್ಟ್ರಭಕ್ತ ಬಳಗ ಕಾರ್ಯಕರ್ತರಿಂದ ಬೂತ್ ಮಟ್ಟದ ಸಂಘಟನೆ ಆರಂಭಿಸಲಾಗಿದೆ. ಯಾವುದೇ ಸಂದರ್ಭದಲ್ಲಿ ಪಾಲಿಕೆ ಚುನಾವಣೆ ಕೂಡ ಬರಬಹುದು. ಬಿಜೆಪಿಯಲ್ಲಿ ಎಲ್ಲ ನಾಯಕರ , ಮುಖಂಡರ ಮಕ್ಕಳಿಗೆ ಟಿಕೆಟ್​​ ನೀಡಲಾಗಿದೆ. ಆದರೆ ಈಶ್ವರಪ್ಪ ಕುಟುಂಬಕ್ಕೆ ಮಾತ್ರ ಅನ್ಯಾಯ ಆಗಿದೆ. ಹೀಗಾಗಿ ಮುಂಬರುವ ಚುನಾವಣೆಯಲ್ಲಿ ಈಶ್ವರಪ್ಪನವರು ಅಥವಾ ತಾನು ಕಣಕ್ಕಿಳಿಯಲಿದ್ದೇವೆ. ಈ ಕುರಿತು ರಾಷ್ಟ್ರಭಕ್ತ ಬಳಗದ ಕಾರ್ಯಕರ್ತರು ನಿರ್ಧಾರ ಮಾಡಲಿದ್ದಾರೆ ಎಂದು ತಿಳಿಸಿದರು.

ಇನ್ನು 2028ರ ವಿಧಾನಸಭೆ ಚುನಾವಣೆಗೆ ಕೆ.ಎಸ್​​.ಈಶ್ವರಪ್ಪ ಸಿದ್ಧತೆ ಆರಂಭಿಸಿದ್ದು, ರಾಷ್ಟ್ರಭಕ್ತರ ಬಳಗದಿಂದ ಬೂತ್ ಮಟ್ಟದ ಸಮಾವೇಶಕ್ಕೆ ಶಿವಮೊಗ್ಗ ನಗರದ ಫೇಸ್ ಕಾಲೇಜು ಸಭಾಂಗಣದಲ್ಲಿ ಚಾಲನೆ ನೀಡಲಾಗಿದೆ. ಆ ಮೂಲಕ ಇಂದಿನಿಂದ ಶಿವಮೊಗ್ಗದ 297 ಬೂತ್ ಮಟ್ಟದ ಸಂಘಟನೆ ಆರಂಭವಾಗಲಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular