HomeKarnatakaಕಾರ್ಮಿಕರಿಗೆ ಇಎಸ್ಐ ಆಸ್ಪತ್ರೆಗಳಲ್ಲೇ ಎಲ್ಲಾ ರೀತಿಯ ಚಿಕಿತ್ಸೆ ನೀಡಲು ಸಚಿವ ಸಂತೋಷ್ ಲಾಡ್ ಸೂಚನೆ

ಕಾರ್ಮಿಕರಿಗೆ ಇಎಸ್ಐ ಆಸ್ಪತ್ರೆಗಳಲ್ಲೇ ಎಲ್ಲಾ ರೀತಿಯ ಚಿಕಿತ್ಸೆ ನೀಡಲು ಸಚಿವ ಸಂತೋಷ್ ಲಾಡ್ ಸೂಚನೆ

ಬೆಂಗಳೂರು: ಕಾರ್ಮಿಕರಿಗೆ ಇಎಸ್ಐ ಆಸ್ಪತ್ರೆಯಲ್ಲಿ ಎಲ್ಲಾ ರೀತಿಯ ಚಿಕಿತ್ಸೆ ನೀಡುವಂತೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಖಾಸಗಿ ಆಸ್ಪತ್ರೆಗಳಿಗೆ ರೆಫರ್ ಮಾಡುವುದನ್ನು ಕಡಿಮೆ ಮಾಡಬೇಕು. ಇಎಸ್ಐ ಆಸ್ಪತ್ರೆಗಳಲ್ಲಿ ಅಗತ್ಯ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ವಿಕಾಸಸೌಧದಲ್ಲಿ ಬುಧವಾರ ನಡೆದ ಕಾರ್ಮಿಕ ಇಲಾಖೆ ಅಧಿಕಾರಿಗಳು ಮತ್ತು ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳೊಂದಿಗಿನ ಸಭೆಯಲ್ಲಿ ಸೂಚನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶೇಕಡ 4ರಿಂದ ಶೇಕಡ 15ರವರೆಗೆ ಇಎಸ್ಐ ಕಾರ್ಡ್ ದಾರರು ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗುತ್ತಿದ್ದಾರೆ. ಇದನ್ನು ಕಡಿಮೆ ಮಾಡಲು ಇಎಸ್ಐ ಆಸ್ಪತ್ರೆಗಳಲ್ಲಿ ಅಗತ್ಯ ಸೌಕರ್ಯ ಕಲ್ಪಿಸುವಂತೆ ಸೂಚಿಸಲಾಗಿದೆ. ಸೌಲಭ್ಯ ಕಲ್ಪಿಸಿದ್ದಲ್ಲಿ ಖಾಸಗಿ ಆಸ್ಪತ್ರೆಗಳಿಗೆ ರೆಫರ್ ಆಗುವುದನ್ನು ತಡೆಯಬಹುದಾಗಿದ್ದು, ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular