HomeKarnatakaಕಲಬುರಗಿ, ಮೈಸೂರಿನಲ್ಲಿ ‘ನಿಮ್ಹಾನ್ಸ್’ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಸಿದ್ಧರಾಮಯ್ಯ

ಕಲಬುರಗಿ, ಮೈಸೂರಿನಲ್ಲಿ ‘ನಿಮ್ಹಾನ್ಸ್’ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಸಿದ್ಧರಾಮಯ್ಯ

ಕಲಬುರಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ ಅತ್ಯುನ್ನತ ಆರೋಗ್ಯ ಸೌಕರ್ಯಗಳಿರುವ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ಕಲಬುರಗಿಯಲ್ಲಿ ನಿರ್ಮಾಣಗೊಂಡಿರುವ ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ಕಟ್ಟಡದ ಲೋಕಾರ್ಪಣೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಬೆಂಗಳೂರು, ಮೈಸೂರಿನಲ್ಲಿರುವ ಜಯದೇವ ಹೃದ್ರೋಗ ಆಸ್ಪತ್ರೆ ಶುಚಿತ್ವ ಮತ್ತು ನಿರ್ವಹಣೆಯಲ್ಲಿ ಉತ್ತಮ ಗುಣಮಟ್ಟ ಕಾಯ್ದುಕೊಂಡಿದೆ. ಕಲಬುರಗಿಯ ಜಯದೇವ ಇವೆರಡೂ ಆಸ್ಪತ್ರೆಗಳಿಗಿಂತ ಇನ್ನೂ ಹೆಚ್ಚಿನ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು. ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿರುವ ಜನತೆ ಹೃದ್ರೋಗ ಸಮಸ್ಯೆಗಳಿಗೆ ಈಗ ಬೆಂಗಳೂರಿಗೆ ಬರುವ ಅಗತ್ಯವೇ ಇಲ್ಲ. ಕಲಬುರಗಿಯಲ್ಲೇ ಜಯದೇವ ಆಸ್ಪತ್ರೆ ಲೋಕಾರ್ಪಣೆಗೊಳಿಸಿದ್ದೇವೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಭಾಷಣದಲ್ಲಿ ಕೇಳಿದಂತೆ, “ಕಲಬುರಗಿಯಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು, ಈ ಬಗ್ಗೆ ಬೇಗ ತೀರ್ಮಾನ ತೆಗೆದುಕೊಳ್ಳುವಂತೆ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಗೆ ಸೂಚನೆ ನೀಡಲಾಗಿವುದು. ಮೈಸೂರಿಗೂ ನಿಮ್ಹಾನ್ಸ್ ಘಟಕದ ಅಗತ್ಯವಿದ್ದು, ಅದನ್ನು ಪೂರೈಸುವ ಕಡೆ ಗಮನ ಹರಿಸಬೇಕು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular