BIG NEWS: ಬುಡಕಟ್ಟು ಸಮುದಾಯಕ್ಕೆ 40 ಸಾಂಪ್ರದಾಯಿಕ ವಿಶೇಷ ಮತಗಟ್ಟೆ ಸ್ಥಾಪನೆ

ಬೆಂಗಳೂರು: ನಾಳೆ ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮತಗಟ್ಟೆಗಳಲ್ಲಿ ಕೊನೇ ಹಂತದ ಸಿದ್ಧತೆ ನಡೆಸಲಾಗಿದೆ. ಚುನಾವಣಾ ಆಯೋಗದ ನಿರ್ದೇಶನದಂತೆ ಬುಡಕಟ್ಟು ಸಮುದಾಯಕ್ಕೆ ಪ್ರತ್ಯೇಕ 40 ಸಾಂಪ್ರದಾಯಿಕ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

9 ಜಿಲ್ಲೆಗಳಲ್ಲಿ ಅರಣ್ಯ ಹಾಗೂ ಅರಣ್ಯದ ಅಂಚಿನಲ್ಲಿ ವಾಸವಾಗಿರುವ ಪರಿಶಿಷ್ಟ ಪಂಗಡ, ಆದಿವಾಸಿ ಜನಾಂಗದ ಎರವ, ಪಣಿಯ, ಹಕ್ಕಿ-ಪಿಕ್ಕಿ, ಗೌಡಲು, ಹಸಲರು, ಕಾಡಕುರುಬ, ಜೇನುಕುರುಬ, ಕೊರಗ, ಮಲೈಕುಡಿ, ಸಿದ್ದಿ ಜನಾಂಗದ ಮತದಾರರಿಗಾಗಿ ಸಾಂಪ್ರದಾಯಿಕ ಮತಗಟ್ಟೆ ನಿರ್ಮಿಸಲಾಗಿದೆ.

ಬುಡಕಟ್ಟು ಸಮುದಾಯದ ಜನರು ತಮ್ಮ ಹಕ್ಕು ಚಲಾಯಿಸಲು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಚುನಾವಣಾ ಆಯೋಗ ಈ ಸಿದ್ಧತೆ ನಡೆಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read