ಕಾರವಾರ: ಎಥನಾಲ್ ಸಾಗಿಸುತ್ತಿದ್ದ ಟ್ಯಾಂಕರ್ ನಲ್ಲಿ ಬೆಂಕಿ ಅವಘಡ ಸಂಭವಿಸುತ್ತಿದ್ದು, ರಸ್ತೆ ಮಧ್ಯೆಯೇ ಟ್ಯಾಂಕರ್ ಹೊತ್ತಿ ಉರಿದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ಅರಬೈಲ್ ಘಟ್ಟದಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 63ರ ಅತಿರುವಿನಲ್ಲಿ ಈ ಅವಘಡ ಸಂಭವಿಸಿದೆ. ತಿರುವಿನಲ್ಲಿ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದ ಎಥನಾಲ್ ಟ್ಯಾಂಕರ್ ಗೆ ಬೆಂಕಿ ಹೊತ್ತಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಧಗ ಧಗನೆ ಹೊತ್ತಿ ಉರಿದಿದೆ. ತಕ್ಷಣ ಟ್ಯಾಂಕರ್ ಚಾಲಕ, ಕ್ಲೀನರ್ ವಾಹನದಿಂದ ಇಳಿದು ದೂರ್ ಓಡಿ ಬಚಾವ್ ಆಗಿದ್ದಾರೆ.
ಟ್ಯಾಂಕರ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಿಂದ ಕೇರಳಕ್ಕೆ ಎಥನಾಲ್ ಸಾಗಿಸುತ್ತಿದ್ದಾಗ ಅರಬೈಲ್ ಘಟ್ಟದಲ್ಲಿ ಈ ಘಟನೆ ನಡೆದಿದೆ. ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
