HomeLatest NewsBIG NEWS: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಎಥನಾಲ್ ಟ್ಯಾಂಕರ್ ನಲ್ಲಿ ಬೆಂಕಿ: ಅರಬೈಲ್ ಘಟ್ಟದಲ್ಲಿ ಹೊತ್ತಿ...

BIG NEWS: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಎಥನಾಲ್ ಟ್ಯಾಂಕರ್ ನಲ್ಲಿ ಬೆಂಕಿ: ಅರಬೈಲ್ ಘಟ್ಟದಲ್ಲಿ ಹೊತ್ತಿ ಉರಿದ ಟ್ಯಾಂಕರ್

ಕಾರವಾರ: ಎಥನಾಲ್ ಸಾಗಿಸುತ್ತಿದ್ದ ಟ್ಯಾಂಕರ್ ನಲ್ಲಿ ಬೆಂಕಿ ಅವಘಡ ಸಂಭವಿಸುತ್ತಿದ್ದು, ರಸ್ತೆ ಮಧ್ಯೆಯೇ ಟ್ಯಾಂಕರ್ ಹೊತ್ತಿ ಉರಿದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ಅರಬೈಲ್ ಘಟ್ಟದಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 63ರ ಅತಿರುವಿನಲ್ಲಿ ಈ ಅವಘಡ ಸಂಭವಿಸಿದೆ. ತಿರುವಿನಲ್ಲಿ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದ ಎಥನಾಲ್ ಟ್ಯಾಂಕರ್ ಗೆ ಬೆಂಕಿ ಹೊತ್ತಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಧಗ ಧಗನೆ ಹೊತ್ತಿ ಉರಿದಿದೆ. ತಕ್ಷಣ ಟ್ಯಾಂಕರ್ ಚಾಲಕ, ಕ್ಲೀನರ್ ವಾಹನದಿಂದ ಇಳಿದು ದೂರ‍್ ಓಡಿ ಬಚಾವ್ ಆಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಟ್ಯಾಂಕರ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಿಂದ ಕೇರಳಕ್ಕೆ ಎಥನಾಲ್ ಸಾಗಿಸುತ್ತಿದ್ದಾಗ ಅರಬೈಲ್ ಘಟ್ಟದಲ್ಲಿ ಈ ಘಟನೆ ನಡೆದಿದೆ. ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular