ಶೇ. 1 ರಷ್ಟು ನಿಜವಾಗಿದ್ರೂ ಸಂಪೂರ್ಣ ನಾಚಿಕೆಗೇಡಿನ ಸಂಗತಿ: ಸಂದೇಶಖಾಲಿ ಬಗ್ಗೆ ಬಂಗಾಳ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ಕೊಲ್ಕತ್ತಾ: ಸಂದೇಶಖಾಲಿಯ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಬಗ್ಗೆ ಸಲ್ಲಿಸಲಾದ ಅಫಿಡವಿಟ್‌ನ ವಿಷಯಗಳ ಬಗ್ಗೆ ಗುರುವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಕಲ್ಕತ್ತಾ ಹೈಕೋರ್ಟ್, ಪ್ರಕರಣವು ಶೇಕಡ 1 ರಷ್ಟು ನಿಜವಾಗಿದ್ದರೂ ಅದು ಸಂಪೂರ್ಣವಾಗಿ ನಾಚಿಕೆಗೇಡಿನ ಸಂಗತಿ ಎಂದು ಹೇಳಿದೆ.

ಸಂದೇಶ್‌ಖಾಲಿ ಹಿಂಸಾಚಾರದ ಕುರಿತು ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಮುಂದುವರಿಸಿರುವ ಕಲ್ಕತ್ತಾ ಹೈಕೋರ್ಟ್ ಗುರುವಾರ ಮಹಿಳೆಯರಿಗೆ ಸುರಕ್ಷಿತ ಸ್ಥಳ ಎಂದು ಹೇಳಿರುವ ಪಶ್ಚಿಮ ಬಂಗಾಳ ಸರ್ಕಾರವನ್ನು ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿದೆ.

ಪ್ರಕರಣವನ್ನು “ಅತ್ಯಂತ ನಾಚಿಕೆಗೇಡು” ಎಂದು ಕರೆದ ನ್ಯಾಯಾಲಯವು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು, “ನಾಗರಿಕರ ಸುರಕ್ಷತೆಗೆ ಅಪಾಯವಿದ್ದರೆ ಅದು ಅವರ “100% ಜವಾಬ್ದಾರಿ” ಎಂದು ಹೇಳಿದೆ.

“ಸಂದೇಶಖಾಲಿಯಲ್ಲಿ ನಡೆದಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ. ಸಂದೇಶಖಾಲಿಯಲ್ಲಿ ಸಂಭವಿಸಿದ ಘಟನೆಗಳಿಗೆ ಇಡೀ ಜಿಲ್ಲಾಡಳಿತ ಮತ್ತು ಆಡಳಿತ ಮಂಡಳಿ ನೈತಿಕ ಹೊಣೆಗಾರಿಕೆಯನ್ನು ಹೊಂದಿದೆ. ನಾಗರಿಕರ ಸುರಕ್ಷತೆಗೆ ಧಕ್ಕೆ ಉಂಟಾದರೆ 100% ಜವಾಬ್ದಾರಿ ಆಡಳಿತ ಪಕ್ಷದ ಮೇಲಿದೆ; ಸರ್ಕಾರವು ಜವಾಬ್ದಾರವಾಗಿರುತ್ತದೆ. ,” ಎಂದು ಹೈಕೋರ್ಟ್ ಹೇಳಿದೆ.

ವಿಚಾರಣೆಯ ಸಂದರ್ಭದಲ್ಲಿ, ಲೈಂಗಿಕ ದೌರ್ಜನ್ಯ ಮತ್ತು ಭೂಕಬಳಿಕೆ ಪ್ರಕರಣಗಳಲ್ಲಿ ಸ್ವಯಂ ಪ್ರೇರಿತ ಅರ್ಜಿದಾರರಾದ ವಕೀಲ ಪ್ರಿಯಾಂಕಾ ತಿಬ್ರೆವಾಲ್ ಅವರು ಸಂದೇಶಖಾಲಿಯಿಂದ ಹಲವಾರು ದೂರುಗಳನ್ನು ಸ್ವೀಕರಿಸಿದ್ದಾರೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read