ವಿಜಯಪುರ: ನನ್ನ ಕುತ್ತಿಗೆ ಕೊಯ್ದರೂ ನಾನು ಬೇರೆ ಪಕ್ಷಕ್ಕೆ ಹೋಗುವುದಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ನೀವು ಹೊಸ ಪಕ್ಷ ಕಟ್ಟುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಈಶ್ವರಪ್ಪ, ನನ್ನ ಕುತ್ತಿಗೆ ಕೊಯ್ದರೂ ನಾನು ಬೇರೆ ಪಕ್ಷಕ್ಕೆ ಹೋಗುವುದಿಲ್ಲ ಮತ್ತು ನಾನು ಯಾವತ್ತೂ ಬೇರೆ ಪಕ್ಷ ಕಟ್ಟುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಯತ್ನಾಳ್ ಅವರು ಹೊಸ ಪಕ್ಷ ಕಟ್ಟುತ್ತಾರೋ ಇಲ್ಲವೋ ಗೊತ್ತಿಲ್ಲ. ಅದನ್ನು ಅವರಿಗೆ ಕೇಳಬೇಕು. ನಾನು ಮಾತ್ರ ಯಾವ ಪಕ್ಷ ಕಟ್ಟುವುದಿಲ್ಲ, ನನ್ನ ಕುತ್ತಿಗೆ ಕೊಯ್ದರೂ ಬೇರೆ ಪಕ್ಷಕ್ಕೆ ಹೋಗುವುದಿಲ್ಲ ಎಂದು ಹೇಳಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಧ್ಯಸ್ಥಿಕೆಯಿಂದ ಕದನ ವಿರಾಮ ಘೋಷಣೆಯಾಗಿತ್ತು. ಕೇವಲ ಮೂರೇ ಗಂಟೆಯಲ್ಲಿ ಪಾಕಿಸ್ತಾನ ತನ್ನ ನರಿ ಬುದ್ಧಿ ತೋರಿಸಿದೆ. ಪ್ರಧಾನಿ ಕೈಗೊಂಡ ನಿರ್ಧಾರದಿಂದ ಪಾಕಿಸ್ತಾನಕ್ಕೆ ಅನ್ನ, ನೀರು ಇಲ್ಲದ ಸ್ಥಿತಿ ಬಂದಿತ್ತು. ಇದೇ ರೀತಿ ಮುಂದುವರೆದರೆ ಭೂಪಟದಲ್ಲೇ ಪಾಕಿಸ್ತಾನ ಇಲ್ಲದಂತಾಗುತ್ತದೆ ಎಂದು ಹೇಳಿದ್ದಾರೆ.