ನನ್ನನ್ನು ಶಾಶ್ವತವಾಗಿ ಅನರ್ಹಗೊಳಿಸಿದರೂ ನಾನು ಹೆದರುವುದಿಲ್ಲ; ಕೋರ್ಟ್ ಶಿಕ್ಷೆ ಬಳಿಕ ರಾಹುಲ್ ಮೊದಲ ಪ್ರತಿಕ್ರಿಯೆ

ಶಾಶ್ವತವಾಗಿ ನನ್ನನ್ನ ಅನರ್ಹಗೊಳಿಸಿದರೂ ನಾನು ಯಾರಿಗೂ ಹೆದರುವುದಿಲ್ಲ ಎಂದ ಕಾಂಗ್ರೆಸ್ ನ ರಾಹುಲ್ ಗಾಂಧಿ ಹೇಳಿದ್ದಾರೆ. 2019ರ ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ನ್ಯಾಯಾಲಯದ ತೀರ್ಪಿನ ನಂತರ ಸಂಸದ ಸ್ಥಾನದಿಂದ ಅನರ್ಹಗೊಂಡ ರಾಹುಲ್ ಗಾಂಧಿ ತಮ್ಮ ಮೊದಲ ಪ್ರತಿಕ್ರಿಯೆ ನೀಡಿಡದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ನಾನು ಯಾರಿಗೂ ಹೆದರುವುದಿಲ್ಲ, ಶಾಶ್ವತವಾಗಿ ನನ್ನನ್ನು ಅನರ್ಹಗೊಳಿಸಿದರೂ ನನ್ನ ಕೆಲಸವನ್ನು ಮಾಡುತ್ತೇನೆ ಎಂದು ಹೇಳಿದರು.

ಭಾರತದ ಜನರ ಪ್ರಜಾಸತ್ತಾತ್ಮಕ ಧ್ವನಿಯನ್ನು ರಕ್ಷಿಸಲು ನಾನು ಇಲ್ಲಿದ್ದೇನೆ. ಅದನ್ನು ಮುಂದುವರಿಸುತ್ತೇನೆ, ನಾನು ಯಾರಿಗೂ ಹೆದರುವುದಿಲ್ಲ. ಪ್ರಧಾನಿ ನರೇಂದ್ರ ಮೋದಿಯವರನ್ನು ರಕ್ಷಿಸಲು ಇದು ಸಂಪೂರ್ಣ ನಾಟಕವಾಗಿದೆ. ಗೌತಮ್ ಅದಾನಿ ಶೆಲ್ ಕಂಪನಿಗಳಿಗೆ 20,000 ಕೋಟಿ ರೂ. ಯಾರಿಂದ ಹೋಗಿದೆ ಎಂಬ ಸರಳ ಪ್ರಶ್ನೆಗೆ ಉತ್ತರವಿಲ್ಲ. ಜೈಲುಶಿಕ್ಷೆ ಅಥವಾ ಅನರ್ಹತೆಯ ಈ ಬೆದರಿಕೆಗಳಿಗೆ ನಾನು ಹೆದರುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದರು.

ಅದಾನಿ ಕುರಿತ ನನ್ನ ಮುಂದಿನ ಭಾಷಣದ ಬಗ್ಗೆ ಪ್ರಧಾನಿ ಹೆದರಿದ್ದಾರೆ. ಅದನ್ನು ಪ್ರಧಾನಿ ಕಣ್ಣಲ್ಲಿ ನಾನು ಗಮನಿಸಿದ್ದೇನೆ. ಅದಕ್ಕಾಗಿಯೇ ಇದನ್ನೆಲ್ಲಾ ಮಾಡಿದ್ದಾರೆ ಎಂದು ರಾಹುಲ್ ಆರೋಪಿಸಿದರು.

ಗುಜರಾತ್‌ನ ಸೂರತ್‌ನ ನ್ಯಾಯಾಲಯವು 2019 ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಯನ್ನು ತಪ್ಪಿತಸ್ಥರೆಂದು ಘೋಷಿಸಿ 2 ವರ್ಷ ಶಿಕ್ಷೆ ವಿಧಿಸಿದೆ. ಇದರಿಂದಾಗಿ ಅವರು ಸಂಸತ್ ಸದಸ್ಯ ಸ್ಥಾನದಿಂದ ಅಮಾನತುಗೊಂಡಿದ್ದಾರೆ. ಮೋದಿ ಉಪನಾಮ ಹೇಳಿಕೆಗಳ ಬಗ್ಗೆ ರಾಹುಲ್ ಗಾಂಧಿ ವಿರುದ್ಧ ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read