ರಾಮನಗರ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಭಾನುವಾರ ಮೊದಲ ಬಾರಿಗೆ ಸ್ವಕ್ಷೇತ್ರ ಕನಕಪುರಕ್ಕೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೃತಜ್ಞತಾ ಸಮರ್ಪಣಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕ್ಷೇತ್ರದ ವಿವಿಧೆಡೆ ಸಾರ್ವಜನಿಕರನ್ನು ಭೇಟಿಯಾಗಿ ಧನ್ಯವಾದ ಹೇಳಿದ ಅವರು, ಸಂಜೆ ವೇಳೆಗೆ ಸ್ವಗ್ರಾಮ ದೊಡ್ಡ ಆಲಹಳ್ಳಿಗೆ ಭೇಟಿ ನೀಡಿ ತಮ್ಮ ನಿವಾಸಕ್ಕೆ ತೆರಳಿದರು. ಈ ವೇಳೆ ತಾಯಿಯ ಆಶೀರ್ವಾದ ಪಡೆದುಕೊಂಡರು.
ಸಾಮಾಜಿಕ ಜಾಲತಾಣದಲ್ಲಿ ತಮ್ಮ ತಾಯಿ ಜೊತೆಗಿರುವ ಫೋಟೋ ಹಂಚಿಕೊಂಡ ಸಿಎಂ ಭಾವನಾತ್ಮಕ ಪೋಸ್ಟ್ ಹಾಕಿದ್ದಾರೆ. ಬದುಕಿನ ಸಮರದಲ್ಲಿ ನಾನು ಗೆದ್ದ ಪ್ರತಿ ಪ್ರಶಸ್ತಿಯೂ ಅವಳ ತ್ಯಾಗಕ್ಕೆ ಸಂದ ಗೌರವ. ನನ್ನ ‘ಗೌರ’ವವ’ಮ್ಮ’ ಎಂದು ತಿಳಿಸಿದ್ದಾರೆ. ಅವರ ಈ ಪೋಸ್ಟ್ ಗೆ ಭಾರೀ ಪ್ರತಿಕ್ರಿಯೆ ಬಂದಿವೆ.

