HomeLatest Newsಪ್ರತಿದಿನವೂ ಬರ್ತಡೇ: ನಟ ದರ್ಶನ್ 49ನೇ ಹುಟ್ಟುಹಬ್ಬಕ್ಕೆ ಪತ್ನಿ ವಿಜಯಲಕ್ಷ್ಮಿ ಶುಭಾಶಯ

ಪ್ರತಿದಿನವೂ ಬರ್ತಡೇ: ನಟ ದರ್ಶನ್ 49ನೇ ಹುಟ್ಟುಹಬ್ಬಕ್ಕೆ ಪತ್ನಿ ವಿಜಯಲಕ್ಷ್ಮಿ ಶುಭಾಶಯ

ನಟ ದರ್ಶನ್ ಅವರಿಗೆ ಇಂದು 49ನೇ ವರ್ಷದ ಹುಟ್ಟುಹಬ್ಬ. ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ಕಳೆದ ವರ್ಷ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿದ್ದ ದರ್ಶನ್ ಪತ್ನಿ, ಮಗ ಮತ್ತು ಕೆಲವು ಸ್ನೇಹಿತರ ಜೊತೆಗೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಈ ವರ್ಷ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ದರ್ಶನ್ ಹುಟ್ಟುಹಬ್ಬಕ್ಕೆ ಪತ್ನಿ ವಿಜಯಲಕ್ಷ್ಮಿ ವಿಶ್ ಮಾಡಿ ಪೋಸ್ಟ್ ಹಾಕಿದ್ದಾರೆ.

ದರ್ಶನ್ ಕೇಕ್ ಕಟ್ ಮಾಡುವ ಹಳೆಯ ಫೋಟೋ ಹಂಚಿಕೊಂಡು ವಿಶ್ ಮಾಡಿದ್ದಾರೆ. ದರ್ಶನ್ ಗೆ ಪ್ರತಿದಿನ ಹುಟ್ಟುಹಬ್ಬ. ಪ್ರತಿದಿನ ಆಚರಿಸಲ್ಪಡುವ ವ್ಯಕ್ತಿಗೆ ಜನ್ಮದಿನದ ಶುಭಾಶಯಗಳು ಎಂದು ಪೋಸ್ಟ್ ನಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

Instagram ನಲ್ಲಿ ಈ ಪೋಸ್ಟ್ ವೀಕ್ಷಿಸಿ

Vijayalakshmi darshan (@viji.darshan) ರಿಂದ ಹಂಚಲಾದ ಪೋಸ್ಟ್

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular