HomeKarnatakaಲಂಚಕ್ಕೆ ಬೇಡಿಕೆ ಇಟ್ಟಿದ್ದಕ್ಕೆ, ಸ್ವೀಕರಿಸಿದ್ದಕ್ಕೆ ಸಾಕ್ಷ್ಯ ಕಡ್ಡಾಯ: ಹೈಕೋರ್ಟ್ ಆದೇಶ

ಲಂಚಕ್ಕೆ ಬೇಡಿಕೆ ಇಟ್ಟಿದ್ದಕ್ಕೆ, ಸ್ವೀಕರಿಸಿದ್ದಕ್ಕೆ ಸಾಕ್ಷ್ಯ ಕಡ್ಡಾಯ: ಹೈಕೋರ್ಟ್ ಆದೇಶ

ಬೆಂಗಳೂರು: ಲಂಚಕ್ಕೆ ಬೇಡಿಕೆ ಇಟ್ಟಿದ್ದಕ್ಕೆ ಮತ್ತು ಸ್ವೀಕರಿಸುವುದಕ್ಕೆ ಸಾಕ್ಷ್ಯ ಕಡ್ಡಾಯ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಭ್ರಷ್ಟಾಚಾರ ಪ್ರಕರಣಗಳಲ್ಲಿ ತನಿಖಾ ಸಂಸ್ಥೆಗಳು ಸರ್ಕಾರಿ ಅಧಿಕಾರಿಗಳಿಂದ ಕೇವಲ ಹಣ ವಶಪಡಿಸಿಕೊಂಡರೆ ಅಪರಾಧ ಸಾಬೀತಾಗುವುದಿಲ್ಲ. ಆರೋಪಿಗಳು ಲಂಚಕ್ಕೆ ಬೇಡಿಕೆ ಇಟ್ಟ ಮತ್ತು ಲಂಚ ಸ್ವೀಕರಿಸಿದ ಸಾಕ್ಷ್ಯಗಳು ಕಡ್ಡಾಯವಾಗಿ ಇರಬೇಕೆಂದು ಹೈಕೋರ್ಟ್ ತಿಳಿಸಿದೆ.

ಭ್ರಷ್ಟಾಚಾರ ಪ್ರಕರಣದಲ್ಲಿ ಚಿಕ್ಕಬಳ್ಳಾಪುರದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತಮಗೆ ವಿಧಿಸಿದ ಶಿಕ್ಷೆ ರದ್ದು ಕೋರಿ ಶಿಡ್ಲಘಟ್ಟ ತಾಲೂಕು ಕಚೇರಿ ಬೆರಳಚ್ಚುಗಾರರ ಜಯಚಂದ್ರ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಸ್. ರಾಚ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಕರಣದಲ್ಲಿ ಜಯಚಂದ್ರರನ್ನು ಖುಲಾಸೆಗೊಳಿಸಲಾಗಿದೆ. ರೈತರೊಬ್ಬರು ಕೃಷಿಕರೆಂಬುದನ್ನು ದೃಢೀಕರಿಸಿ ಪ್ರಮಾಣ ಪತ್ರ ವಿತರಿಸಲು ಕೋರಿದಾಗ ಜಯಚಂದ್ರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬಗ್ಗೆ ಪ್ರಕರಣ ದಾಖಲಾಗಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular