ಬೆಂಗಳೂರು : ಶಾಸಕ ಬಿ.ವೈ ವಿಜಯೇಂದ್ರ ಇಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದಾರೆ.
ಬೆಂಗಳೂರಿನ ಜೆ.ಪಿ.ನಗರದಲ್ಲಿರುವ ಮಾಜಿ ಸಿಎಂ H.D.ಕುಮಾರಸ್ವಾಮಿ ನಿವಾಸಕ್ಕೆ ಶಾಸಕ ಬಿ.ವೈ.ವಿಜಯೇಂದ್ರ ಭೇಟಿ ನೀಡಿ ಹೆಚ್ಡಿಕೆ ಆರೋಗ್ಯ ವಿಚಾರಿಸಿದ್ದಾರೆ ಎನ್ನಲಾಗಿದೆ. ನಂತರ ಕೆಲವು ಹೊತ್ತು ರಾಜಕೀಯ ವಿಚಾರಗಳ ಬಗ್ಗೆ ಕೂಡ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಇಂದು ಮಾನ್ಯ ಮಾಜಿ ಮುಖ್ಯಮಂತ್ರಿಗಳಾದ ಶ್ರೀ @hd_kumaraswamy ಅವರ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ಕುಶಲೋಪರಿ ವಿಚಾರಿಸಲಾಯಿತು. ಈ ಸಂದರ್ಭದಲ್ಲಿ ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ @CKRBJP ಅವರು ಹಾಗೂ ಪಕ್ಷದ ಮುಖಂಡರಾದ ಶ್ರೀ ಸೋಮಶೇಖರ್ ಅವರು ಉಪಸ್ಥಿತರಿದ್ದರು. pic.twitter.com/qeFbmzSYPV
— Vijayendra Yediyurappa (@BYVijayendra) September 6, 2023