
ಅಲ್ಲದೆ ಡಾ. ರಾಜನಂದಿನಿ ಆ ಸಂದರ್ಭದಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದು, ಮೂರು ತಿಂಗಳ ಬಳಿಕ ಇದೀಗ ಕಾಂಗ್ರೆಸ್, ಡಾ. ರಾಜನಂದಿನಿ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಿದೆ. ಈ ಕುರಿತಂತೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಹೆಸ್. ಸುಂದರೇಶ್ ಆದೇಶ ಹೊರಡಿಸಿದ್ದಾರೆ.
ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ತಮ್ಮ ಪುತ್ರಿ ಬಿಜೆಪಿ ಸೇರ್ಪಡೆಗೊಂಡಿದ್ದರ ಕುರಿತು ಬೇಸರ ವ್ಯಕ್ತಪಡಿಸಿದ್ದ ಕಾಗೋಡು ತಿಮ್ಮಪ್ಪ, ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಅವರನ್ನು ಬೆಂಬಲಿಸಿದ್ದರು. ಈ ಚುನಾವಣೆಯಲ್ಲಿ ಬಿಜೆಪಿಯ ಹರತಾಳು ಹಾಲಪ್ಪ ವಿರುದ್ಧ ಬೇಳೂರು ಗೋಪಾಲಕೃಷ್ಣ ಗೆಲುವು ಸಾಧಿಸಿದ್ದರು.

