V. ಸೋಮಣ್ಣ ಫೋನ್ ರಿಸೀವ್ ಮಾಡ್ತಿಲ್ಲ, ಇನ್ನೇನು ಮಾಡಕ್ಕೆ ಆಗಲ್ಲ ಎಂದ ಮಾಜಿ ಸಿಎಂ BSY

ಬೆಂಗಳೂರು : ಮಾಜಿ ಸಚಿವ ವಿ.ಸೋಮಣ್ಣ ಫೋನ್ ಮಾಡಿದ್ರೆ ರಿಸೀವ್ ಮಾಡ್ತಿಲ್ಲ, ಏನೂ ಮಾಡಕ್ಕೆ ಆಗಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ ಮಾಜಿ ಸಚಿವ ಸೋಮಣ್ಣ ಅಸಮಾಧಾನಗೊಂಡಿರುವ ಕುರಿತು ಪ್ರತಿಕ್ರಿಯೆ ನೀಡಿದರು.

ಅಸಮಾಧಾನಗೊಂಡಿರುವ ಮಾಜಿ ಸಚಿವ ವಿ. ಸೋಮಣ್ಣ ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದೇವೆ, ಫೋನ್ ಮಾಡಿದ್ರೆ ರಿಸೀವ್ ಮಾಡ್ತಿಲ್ಲ, ಏನೂ ಮಾಡಕ್ಕೆ ಆಗಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು. ಸೋಮಣ್ಣ ಮಾತನಾಡಿದ್ದನ್ನು ನಾನು ನೋಡಿದ್ದೇನೆ. ಅವರಿಗೆ ಕರೆ ಮಾಡುವ ಪ್ರಯತ್ನ ಮಾಡಿದ್ದೇವೆ. ಅವರನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತೇವೆ. ಬರಲಿಲ್ಲ ಅಂದ್ರೆ ಏನು ಮಾಡೋಕೆ ಆಗಲ್ಲ ಎಂದು ಹೇಳಿದರು.

ವಿಧಾನಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರೂ ಎರಡೂ ಕ್ಷೇತ್ರಗಳಲ್ಲಿ ಸೋಲನುಭವಿಸಿದ ಹಿನ್ನೆಲೆ ಮಾಜಿ ಸಚಿವ ವಿ.ಸೋಮಣ್ಣ, ಬಿಜೆಪಿ ವರಿಷ್ಠರ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದರು. ತುಮಕೂರಿನ ಸಿದ್ದಗಂಗಾ ಮಠಕ್ಕೆ ತೆರಳಿ ಸಿದ್ದಗಂಗಾ ಶ್ರೀಗಳ ಬಳಿ ಅಳಲು ತೋಡಿಕೊಂಡಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read