HomeLatest NewsBIG NEWS: ಮಾಜಿ ಶಾಸಕ ಮೊಹಿಯುದ್ದೀನ್ ಬಾವ ವಿರುದ್ಧ FIR ದಾಖಲು

BIG NEWS: ಮಾಜಿ ಶಾಸಕ ಮೊಹಿಯುದ್ದೀನ್ ಬಾವ ವಿರುದ್ಧ FIR ದಾಖಲು

ಮಂಗಳೂರು: ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಮಾಜಿ ಶಾಸಕ ಮೋಹಿಯುದ್ದೀನ್ ಬಾವ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಮೊಹಿಯುದ್ದೀನ್ ಬಾವ ಹಾಗೂ ಅವರ ಇಬ್ಬರು ಸಹಚರರ ವಿರುದ್ಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಮಗಾರಿಯೊಂದರ ಬಿಲ್ ಮಂಜೂರು ಮಾಡುವ ವಿಚಾರವಾಗಿ ನವಮಂಗಳೂರು ಬಂದರು ಪ್ರಾಧಿಕಾರ ಉಪಾಧ್ಯಕ್ಷರ ಕಚೇರಿಗೆ ಇಬ್ಬರು ಸಹಚರರೊಂದಿಗೆ ನುಗ್ಗಿ ಗಲಾಟೆ ನಡೆಸಿದ್ದರು. ಅಲ್ಲದೇ ಅಲ್ಲಿನ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು. ಪ್ರಾಧಿಕಾರದ ಉಪಾಧ್ಯಕ್ಷರು ಹೊರಹೋಗಲು ಬಿಡದೇ ಅವರನ್ನು ತಡೆದು ನಿಲ್ಲಿಸಿದ್ದಾರೆ. ಗಲಾಟೆ ಬೆದರಿಕೆ ಹಾಕಿದ್ದಾರೆ. ಬೇರೆ ಕರ್ತವ್ಯಕ್ಕೆಂದು ಕಾರಿನಲ್ಲಿ ತೆರಳುತ್ತಿದ್ದಾಗಲೂ ಅವರನ್ನು ತಡೆದು ನಿಲ್ಲಿಸಿ ವಾಗ್ವಾದ ನಡೆಸಿದ್ದಾರೆ. ಈ ಬಗ್ಗೆ ಎನ್.ಎಂ.ಪಿ.ಎ ಕಾರ್ಯದರ್ಶಿ ಪಣಂಬೂರು ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular