HomeKarnatakaBREAKING NEWS: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಅದೃಷ್ಟವಶಾತ್ ಮಾಜಿ ಶಾಸಕ ಪಾರು

BREAKING NEWS: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಅದೃಷ್ಟವಶಾತ್ ಮಾಜಿ ಶಾಸಕ ಪಾರು

ಕಾರವಾರ: ವಿದ್ಯುತ್ ಕಂಬಕ್ಕೆ ಮಾಜಿ ಶಾಸಕರ ಕಾರು ಡಿಕ್ಕಿಯಾಗಿ, ಮಾಜಿ ಶಾಸಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ.

ಮಾಜಿ ಶಾಸಕ ವಿ.ಎಸ್.ಪಾಟೀಲ್ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿನ ಹಾರವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಅಪಘಾತ ಸಂಭವಿಸುತ್ತಿದ್ದಂತೆ ಕಾರಿನ ಏರ್ ಬ್ಯಾಗ್ ಓಪನ್ ಆಗಿದ್ದರಿಂದ ಸಾವು-ನೋವು ಸಂಭವಿಸಿಲ್ಲ. ಮಾಜಿ ಶಾಸಕ ವಿ.ಎಸ್.ಪಾಟೀಲ್ ಕಾರಿನಲ್ಲಿ ಸ್ವಗ್ರಾಮ ಅಂದಲಗಿಗೆ ತೆರಳುತ್ತಿದ್ದರು. ಈ ವೇಳೆ ಈ ಅಪಘಾತ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿ.ಎಸ್.ಪಾಟೀಲ್ ಅವರ ಎದೆಗೆ ಪೆಟ್ಟಾಗಿದೆ. ಕಾರು ಚಾಲಕ ಆನಂದ್ ಕಣ್ಣಿಗೆ ಗಾಯಗಳಾಗಿವೆ. ಇಬ್ಬರನ್ನು ಮುಂಡಗೋಡು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular