HomeIndiaBREAKING NEWS: ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆಸಿಆರ್ ಆಸ್ಪತ್ರೆಗೆ ದಾಖಲು

BREAKING NEWS: ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆಸಿಆರ್ ಆಸ್ಪತ್ರೆಗೆ ದಾಖಲು

ಹೈದರಾಬಾದ್: ತೆಲಂಗಾಣ ಮಾಜಿ ಮುಖ್ಯಮಂತ್ರಿ, ಬಿ.ಆರ್.ಎಸ್. ಪಕ್ಷದ ಮುಖ್ಯಸ್ಥ ಕೆ. ಚಂದ್ರಶೇಖರರಾವ್ ಅಸ್ವಸ್ಥರಾಗಿದ್ದು, ಅವರನ್ನು ಯಶೋದಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶುಕ್ರವಾರ ಬೆಳಗ್ಗೆ ಎರ್ರವೆಲ್ಲಿ ಫಾರ್ಮ್ ಹೌಸ್ ನಲ್ಲಿ ತೀವ್ರ ಅಸ್ವಸ್ಥರಾಗಿದ್ದ ಕೆಸಿಆರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಪರೀಕ್ಷೆ ನಡೆಸಿ ಚಿಕಿತ್ಸೆ ನೀಡಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅವರು ಆಕಸ್ಮಿಕವಾಗಿ ಕೆಳಗೆ ಬಿದ್ದು ಗಾಯಗೊಂಡಿದ್ದಾರೆ. ಕಾಲಿಗೆ ತೀವ್ರ ಪೆಟ್ಟು, ಗಾಯವಾದ ನಂತರ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ತೆಲಂಗಾಣದ ಮೊದಲ ಮುಖ್ಯಮಂತ್ರಿ ಆಗಿದ್ದ ಕೆಸಿಆರ್ 10 ವರ್ಷ ಆಡಳಿತ ನಡೆಸಿ ಇತ್ತೀಚೆಗಷ್ಟೇ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿ.ಆರ್.ಎಸ್. ಪಕ್ಷಕ್ಕೆ ಹಿನ್ನಡೆಯಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular