BREAKING : ‘SSLC’ , ‘PUC’ ವಿದ್ಯಾರ್ಥಿಗಳಿಗೆ ವರ್ಷಕ್ಕೆ 3 ಬಾರಿ ಪರೀಕ್ಷೆ : ಸಂಭವನೀಯ ವೇಳಾಪಟ್ಟಿ ಪ್ರಕಟ

ಬೆಂಗಳೂರು : SSLC  ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ವರ್ಷದಲ್ಲಿ 3 ಬಾರಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಇದೀಗ ಸಂಭಾವನೀಯ ವೇಳಾಪಟ್ಟಿ ಬಿಡುಗಡೆ ಮಾಡಿದೆ.

ಇದುವರೆಗೆ ವರ್ಷಕ್ಕೆ 2 ಪರೀಕ್ಷೆ ಮಾತ್ರ ನಡೆಸುತ್ತಿದ್ದ ಶಿಕ್ಷಣ ಇಲಾಖೆ ಇನ್ಮುಂದೆ ವರ್ಷಕ್ಕೆ ಮೂರು ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಿದೆ.

10ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಲಿರುವ 3 ಪರೀಕ್ಷೆಗಳ ವೇಳಾಪಟ್ಟಿ
• ಪರೀಕ್ಷೆ-1 ಮಾರ್ಚ್ 30ರಿಂದ ಏಪ್ರಿಲ್ 15ರವರೆಗೆ ನಡೆಸಲು ನಿರ್ಧಾರ
• ಪರೀಕ್ಷೆ-2 ಜೂನ್ 12ರಿಂದ ಜೂನ್ 19ರವರೆಗೆ ನಡೆಸಲು ನಿರ್ಧಾರ
• ಪರೀಕ್ಷೆ-3 ಜುಲೈ 29ರಿಂದ ಆಗಸ್ಟ್ 5ರವರೆಗೆ ನಡೆಸಲು ತೀರ್ಮಾನ

ಪಿಯುಸಿ ವಿದ್ಯಾರ್ಥಿಗಳಿಗೆ ನಡೆಸಲಿರುವ 3 ಪರೀಕ್ಷೆಗಳ ವೇಳಾಪಟ್ಟಿ ವೇಳಾಪಟ್ಟಿ 
• ಪರೀಕ್ಷೆ-1 ಮಾರ್ಚ್ 1ರಿಂದ ಮಾರ್ಚ್ 25ರವರೆಗೆ ನಡೆಸಲು ನಿರ್ಧಾರ
• ಪರೀಕ್ಷೆ-2 ಮೇ 15ರಿಂದ ಜೂನ್ 5ರವರೆಗೆ ನಡೆಸಲು ನಿರ್ಧಾರ
• ಪರೀಕ್ಷೆ-3 ಜುಲೈ 12ರಿಂದ ಜುಲೈ 30ರವರೆಗೆ ನಡೆಸಲು ನಿರ್ಧಾರ

ಶಿಕ್ಷಕರ ದಿನಾಚರಣೆ ದಿನವೇ SSLC ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಇನ್ಮುಂದೆ ವರ್ಷಕ್ಕೆ 3 ಬಾರಿ ಪರೀಕ್ಷೆ ಬರೆಯಬಹುದು.ಈ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅನುತ್ತೀರ್ಣರಾಗುವ ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳು ಇನ್ಮುಂದೆ ವರ್ಷಕ್ಕೆ 3 ಬಾರಿ ಪರೀಕ್ಷೆ ಬರೆಯಬಹುದು. ಅನುತ್ತೀರ್ಣ ಅಥವಾ ಕಡಿಮೆ ಅಂಕ ಬಂದವರು 3 ಬಾರಿ ಪರೀಕ್ಷೆ ಬರೆಯಬಹುದಕ್ಕೆ ಅವಕಾಶ ನೀಡಲಾಗುತ್ತದೆ. ಫೇಲ್ ಅಥವಾ ಕಡಿಮೆ ಅಂಕ ಬಂದವರು 3 ಬಾರಿ ಪರೀಕ್ಷೆ ಬರೆಯಬಹುದು. 32.44 ಲಕ್ಷ ಮಕ್ಕಳಿಗೆ ಕಲಿಕಾ ಬಲವರ್ಧನೆ ಕಾರ್ಯಕ್ರಮ ನಡೆಸುತ್ತೇವೆ. ಶೈಕ್ಷಣಿಕ ಪ್ರಗತಿ, ಅರ್ಥಪೂರ್ಣ ಕಲಿಕೆ, ಜ್ಞಾನಾಧಾರಿತ ವೃದ್ಧಿಯ ಗುರಿಯೊಂದಿಗೆ ವರ್ಷದಲ್ಲಿ ಮೂರು ಬಾರಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸೋದಕ್ಕೆ ನಿರ್ಧಾರವನ್ನು ಶಿಕ್ಷಣ ಇಲಾಖೆ ಕೈಗೊಂಡಿದೆ ಎಂಬುದಾಗಿ  ವಿಧಾನಸೌಧದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read