HomeKarnatakaಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳಿಗೆ ಶಾಕ್: ಪ್ರಶ್ನೆ ಪತ್ರಿಕೆ ಬದಲು ಉತ್ತರ ಪತ್ರಿಕೆ ನೀಡಿ ಎಡವಟ್ಟು

ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳಿಗೆ ಶಾಕ್: ಪ್ರಶ್ನೆ ಪತ್ರಿಕೆ ಬದಲು ಉತ್ತರ ಪತ್ರಿಕೆ ನೀಡಿ ಎಡವಟ್ಟು

ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ವಾಣಿಜ್ಯ ವಿಭಾಗದ ಅಂತಿಮ ವರ್ಷದ ಇ- ಕಾಮರ್ಸ್ ವಿಷಯದ ಪ್ರಶ್ನೆ ಪತ್ರಿಕೆ ಬದಲು ಉತ್ತರ ಪತ್ರಿಕೆ ನೀಡಿದ ಘಟನೆ ನಡೆದಿದೆ.

ಮಂಗಳವಾರ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆಯ ಬದಲು ಉತ್ತರಗಳಿದ್ದ ಪತ್ರಿಕೆಗಳನ್ನು ನೀಡಲಾಗಿದೆ. ದಾವಣಗೆರೆ ವಿವಿ ಪರೀಕ್ಷಾ ವಿಭಾಗದ ಅಧಿಕಾರಿಯ ಎಡವಟ್ಟಿನಿಂದಾಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯದೇ ಮನೆಗೆ ಮರಳಿದ್ದಾರೆ. ಪರೀಕ್ಷೆಯನ್ನು ರದ್ದುಪಡಿಸಿ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಬಿಕಾಂ ಅಂತಿಮ ವರ್ಷದ ಸುಮಾರು 600 ವಿದ್ಯಾರ್ಥಿಗಳು ಮಂಗಳವಾರ 6ನೇ ಸೆಮಿಸ್ಟರ್ ನ ಇ- ಕಾಮರ್ಸ್ ವಿಷಯದ ಪರೀಕ್ಷೆ ಬರೆಯಲು ತಮ್ಮ ಕಾಲೇಜುಗಳಿಗೆ ಆಗಮಿಸಿದ್ದಾರೆ.

ಪರೀಕ್ಷಾ ಕೇಂದ್ರದಲ್ಲಿ ಬೆಳಗ್ಗೆ 10 ಗಂಟೆಗೆ ಪ್ರಶ್ನೆ ಪತ್ರಿಕೆ ನೀಡುವ ಬದಲಿಗೆ ಮೌಲ್ಯಮಾಪನ ಮಾಡಲು ಸಿದ್ಧಪಡಿಸಲಾಗಿದ್ದ ಪ್ರಶ್ನೆಗಳ ಜೊತೆಗೆ ಉತ್ತರಗಳನ್ನು ಮುದ್ರಿಸಿದ ಪ್ರತಿಯನ್ನು ವಿದ್ಯಾರ್ಥಿಗಳಿಗೆ ನೀಡಲಾಗಿದೆ. ತಕ್ಷಣವೇ ಎಚ್ಚೆತ್ತು ಪರೀಕ್ಷಾ ಕೊಠಡಿ ಮೇಲ್ವಿಚಾರಕರು ಕುಲಸಚಿವರ ಗಮನಕ್ಕೆ ವಿಷಯ ತಂದಿದ್ದು, ತಪ್ಪಿನ ಅರಿವಾಗುತ್ತಿದ್ದಂತೆ ಪರೀಕ್ಷೆ ರದ್ದುಪಡಿಸಿ ಮುಂದೂಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular