ಮಾ. 25 ರಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ: ಪ್ರವೇಶ ದ್ವಾರಕ್ಕೆ ವಿರುದ್ಧವಾಗಿ ಆಸನ ವ್ಯವಸ್ಥೆಗೆ ಸೂಚನೆ

ಬೆಂಗಳೂರು: ಮಾರ್ಚ್ 25 ರಿಂದ ಆರಂಭವಾಗಲಿರುವ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಪ್ರವೇಶ ದ್ವಾರದ ಕಡೆ ಮುಖ ಮಾಡಿ ಕುಳಿತು ಪರೀಕ್ಷೆ ಬರೆಯುವುದನ್ನು ನಿರ್ಬಂಧಿಸಲಾಗಿದೆ. ಪ್ರವೇಶ ದ್ವಾರಕ್ಕೆ ವಿರುದ್ಧವಾಗಿ ಮುಖ ಮಾಡಿ ಕುಳಿತು ಪರೀಕ್ಷೆ ಬರೆಯುವಂತೆ ಆಸನದ ವ್ಯವಸ್ಥೆ ಮಾಡಬೇಕೆಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೂಚಿಸಿದೆ.

ಹೀಗೆ ಮಾಡುವುದರಿಂದ ಅಕ್ರಮ ಎಸಗಿದಲ್ಲಿ ಪ್ರವೇಶ ದ್ವಾರದಲ್ಲೇ ಕಾಣುತ್ತದೆ. ಹಾಗಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಎಸ್ಎಸ್ಎಲ್ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಪರೀಕ್ಷಾ ಸಿಬ್ಬಂದಿ ನಿರ್ವಹಿಸಬೇಕಾದ ಮಾರ್ಗಸೂಚಿಗಳನ್ನು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.

ಸಾಮಾನ್ಯವಾಗಿ ತರಗತಿ ಕೊಠಡಿಗಳಲ್ಲಿ ವಿದ್ಯಾರ್ಥಿಗಳು ಪ್ರವೇಶ ದ್ವಾರದ ಕಡೆಗೆ ಮುಖ ಮಾಡಿ ಕುಳಿತುಕೊಳ್ಳುತ್ತಾರೆ. ಇದನ್ನು ತಪ್ಪಿಸಲು ಪ್ರವೇಶ ದ್ವಾರಕ್ಕೆ ವಿರುದ್ಧವಾಗಿ ಮುಖ ಮಾಡಿಕೊಳ್ಳುವಂತೆ ಆಸನದ ವ್ಯವಸ್ಥೆ ಮಾಡಬೇಕು. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಬಯಲಿನಲ್ಲಿ ಕುಳಿತು ಪರೀಕ್ಷೆ ಬರೆಯದಂತೆ ಮುಂಜಾಗ್ರತೆ ಕ್ರಮ ವಹಿಸಬೇಕು. ಪರೀಕ್ಷೆಯ ಪಾವಿತ್ರ್ಯತೆ ಕಾಪಾಡಬೇಕು. ಪರೀಕ್ಷಾ ಕೊಠಡಿಗಳಿಗೆ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಬೇಕು ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read