HomeKarnatakaBIGG NEWS : ನಾಳೆಯಿಂದ 'KPSC' ಗ್ರೂಪ್ ಸಿ ಹುದ್ದೆಗಳ ಪರೀಕ್ಷೆ : ಪರೀಕ್ಷಾ ಕೇಂದ್ರಗಳ...

BIGG NEWS : ನಾಳೆಯಿಂದ ‘KPSC’ ಗ್ರೂಪ್ ಸಿ ಹುದ್ದೆಗಳ ಪರೀಕ್ಷೆ : ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

ಬಳ್ಳಾರಿ : ಜಿಲ್ಲೆಯಲ್ಲಿ ಡಿ.16 ಮತ್ತು17ರಂದು ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಕಿರಿಯ ಲೆಕ್ಕ ಸಹಾಯಕರು ಗ್ರೂಪ್ ಸಿ ಹುದ್ದೆಗಳ ಕನ್ನಡ ಭಾಷಾ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯ ಆವರಣವನ್ನು ಐಪಿಸಿ 1973ರ ಕಲಂ 144ರಲ್ಲಿನ ಪ್ರದತ್ತವಾದ ಅಧಿಕಾರ ಚಲಾಯಿಸಿ ನಿರ್ಬಂಧಿತ ಪ್ರದೇಶವೆಂದು ಜಿಲ್ಲಾ ದಂಡಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.

ಅಂದು ನಗರದ ಐದು ಪರೀಕ್ಷಾ ಕೇಂದ್ರಗಳಲ್ಲಿ ಡಿ.16 ರಂದು ಮಧ್ಯಾಹ್ನ 02 ರಿಂದ 04 ರವರೆಗೆ ಹಾಗೂ ಡಿ.17ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 11.30ರವರೆಗೆ ಹಾಗೂ ಮಧ್ಯಾಹ್ನ 02 ರಿಂದ ಸಂಜೆ 04 ರವರೆಗೆ ಕರ್ನಾಟಕ ಲೋಕಸೇವಾ ಪರೀಕ್ಷೆಕೆ ಗ್ರೂಪ್ ‘ಸಿ’ ಕನ್ನಡ ಭಾಷಾ ಪರೀಕ್ಷೆಗಳು ನಡೆಯಲಿsದ್ದು, ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತ ಜೆರಾಕ್ಸ್ ಸೆಂಟರ್ ಮತ್ತು ಇಂಟರ್ನೆಟ್ ಸೆಂಟರ್ಗಳನ್ನು ಕಾರ್ಯನಿರ್ವಹಿಸದಂತೆ ಆದೇಶಿಸಿದ್ದು, ಸದರಿ ಪ್ರದೇಶದಲ್ಲಿ ಅನಧೀಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಲಾಗಿದೆ.

ಈ ಆದೇಶವು ಪರೀಕ್ಷೆಯ ಮೇಲ್ವಿಚಾರಣೆ ಕಾರ್ಯ ನಿರ್ವಹಿಸುವ ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular