HomeLatest Newsಚಿನ್ನದ ನಿಧಿ ಪತ್ತೆಯಾದ ಐತಿಹಾಸಿಕ ಲಕ್ಕುಂಡಿಯಲ್ಲಿ ಇಂದಿನಿಂದ ಉತ್ಖನನ ಆರಂಭ

ಚಿನ್ನದ ನಿಧಿ ಪತ್ತೆಯಾದ ಐತಿಹಾಸಿಕ ಲಕ್ಕುಂಡಿಯಲ್ಲಿ ಇಂದಿನಿಂದ ಉತ್ಖನನ ಆರಂಭ

ಗದಗ: ಗದಗ ತಾಲೂಕಿನ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಜನವರಿ 10ರಂದು ಅಪರೂಪದ ಚಿನ್ನದ ಆಭರಣ ನಿಧಿ ಪತ್ತೆಯಾದ ಬೆನ್ನಲ್ಲೇ ಸರ್ಕಾರ ಇಂದಿನಿಂದ ಉತ್ಖನನ ಪ್ರಾರಂಭಿಸಲು ಮುಂದಾಗಿದೆ.

ಮನೆ ಅಡಿಪಾಯ ತೆಗೆಯುವಾಗ ಸುಮಾರು ಅರ್ಧ ಕೆಜಿಯಷ್ಟು ಚಿನ್ನದ ಆಭರಣಗಳು ಸಿಕ್ಕಿದ್ದ ಲಕ್ಕುಂಡಿ ಈಗ ಎಲ್ಲರ ಗಮನ ಸೆಳೆದಿದೆ. ಗ್ರಾಮದ ಕೋಟೆ ವೀರಭದ್ರೇಶ್ವರ ದೇವಾಲಯ ಮುಂಭಾಗ ಇಂದಿನಿಂದ ಉತ್ಖನನ ಕಾರ್ಯ ಆರಂಭವಾಗಲಿದ್ದು, ಅಧಿಕಾರಿಗಳು ಜನಸಾಮಾನ್ಯರಲ್ಲಿ ಕುತೂಹಲ ಮೂಡಿಸಿದೆ.

ಲಕ್ಕುಂಡಿ ಗ್ರಾಮದ ಕೋಟೆ ವೀರಭದ್ರೇಶ್ವರ ದೇವಾಲಯ ಮತ್ತು ಸಿದ್ದರ ಬಾವಿಗೆ ಸಂಪರ್ಕವಿತ್ತು ಎಂದು ಹೇಳಲಾಗಿದ್ದು, ಉತ್ಖನನ ನಡೆಯುವ ಸ್ಥಳದ ಪಕ್ಕದ ಖಾಲಿ ಜಾಗದಲ್ಲಿ ಈ ಹಿಂದೆ ಗ್ರಾಮದಲ್ಲಿ ನಾಟಕ ಪ್ರದರ್ಶನದ ವೇಳೆ ಭೂಮಿ ಅಗೆಯುವ ಸಂದರ್ಭದಲ್ಲಿ ಕಟ್ಟಡ ಅವಶೇಷಗಳು ಕಂಡುಬಂದಿದ್ದವು. ಅದೇ ಸ್ಥಳದಲ್ಲಿಗೆ ಉತ್ಖನನ ಆರಂಭವಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular