HomeIndiaವೈವಾಹಿಕ ಅತ್ಯಾಚಾರ ಅಪರಾಧವಲ್ಲ, ಇದು ಶಿಕ್ಷಾರ್ಹವಾದರೆ ಸಮಾಜದ ಮೇಲೆ ನೇರ ಪರಿಣಾಮ: ಸುಪ್ರೀಂ ಕೋರ್ಟ್ ಗೆ...

ವೈವಾಹಿಕ ಅತ್ಯಾಚಾರ ಅಪರಾಧವಲ್ಲ, ಇದು ಶಿಕ್ಷಾರ್ಹವಾದರೆ ಸಮಾಜದ ಮೇಲೆ ನೇರ ಪರಿಣಾಮ: ಸುಪ್ರೀಂ ಕೋರ್ಟ್ ಗೆ ಕೇಂದ್ರ ಹೇಳಿಕೆ

ನವದೆಹಲಿ: ವೈವಾಹಿಕ ಅತ್ಯಾಚಾರವನ್ನು ಅಪರಾಧೀಕರಣಗೊಳಿಸುವ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.

ವೈವಾಹಿಕ ಅತ್ಯಾಚಾರದ ವಿಷಯ ಕಾನೂನು ಸಮಸ್ಯೆಗಿಂತ ಹೆಚ್ಚು ಸಾಮಾಜಿಕ ಸಮಸ್ಯೆಯಾಗಿದ್ದು, ಇದನ್ನು ಅಪರಾಧೀಕರಣ ಮಾಡಿದಲ್ಲಿ ಸಮಾಜದ ಮೇಲೆ ನೇರ ಪರಿಣಾಮ ಬೀರುತ್ತದೆ ಎಂದು ಸ್ಪಷ್ಟಪಡಿಸಿದೆ.

ವೈವಾಹಿಕ ಅತ್ಯಾಚಾರ ಅಪರಾಧವೇ ಎಂದು ಸುಪ್ರೀಂ ಕೋರ್ಟ್ ನಲ್ಲಿ ವ್ಯಾಜ್ಯ ನಡೆಯುತ್ತಿದ್ದು, ಈ ಬಗ್ಗೆ ಕೇಂದ್ರ ಸರ್ಕಾರದಿಂದ ಅಫಿಡವಿಟ್ ಮೂಲಕ ಅಭಿಪ್ರಾಯ ಸಲ್ಲಿಸಲಾಗಿದೆ. ಪತ್ನಿಯ ಸಮ್ಮತಿ ಪಡೆದೇ ಪತಿ ಸಂಬಂಧ ಬೆಳೆಸಬೇಕು ನಿಜ. ಇದನ್ನು ಉಲ್ಲಂಘಿಸುವ ಮೂಲಭೂತ ಹಕ್ಕು ಆತನಿಗೆ ಇಲ್ಲ. ಆದರೂ, ಒಂದು ವೇಳೆ ಪತಿಯು ಪತ್ನಿಯೊಂದಿಗೆ ನಡೆಸುವ ಲೈಂಗಿಕ ಕ್ರಿಯೆಯನ್ನು ಅಪರಾಧ ವ್ಯಾಪ್ತಿಗೆ ತಂದರೆ ವೈವಾಹಿಕ ಜೀವನದ ಮೇಲೆ ದೂರಗಾಮಿ ಪರಿಣಾಮ ಬೀರುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದು ಕೋರ್ಟ್ ಅಧಿಕಾರ ವ್ಯಾಪ್ತಿಗೆ ಒಳಪಡುವುದಿಲ್ಲ. ಎಲ್ಲಾ ಪಾಲುದಾರರೊಂದಿಗೆ ರಾಜ್ಯಗಳ ಜೊತೆ ಸರಿಯಾದ ಸಮಾಲೋಚನೆ ನಡೆಸದೆ ವೈವಾಹಿಕ ಅತ್ಯಾಚಾರದ ಬಗ್ಗೆ ನಿರ್ಧರಿಸಲು ಆಗದು ಎಂದು ಸ್ಪಷ್ಟಪಡಿಸಲಾಗಿದೆ.

ಪುರುಷನು ತನ್ನ ಸ್ವಂತ ಹೆಂಡತಿಯೊಂದಿಗಿನ ಲೈಂಗಿಕ ಕ್ರಿಯೆಯನ್ನು “ಅತ್ಯಾಚಾರ” ಎಂದು ಶಿಕ್ಷಾರ್ಹಗೊಳಿಸಿದರೆ, ಅದು ದಾಂಪತ್ಯ ಸಂಬಂಧದ ಮೇಲೆ ತೀವ್ರ ಪರಿಣಾಮ ಬೀರಬಹುದು ಮತ್ತು ಮದುವೆಯ ಸಂಬಂಧದಲ್ಲಿ ಗಂಭೀರ ಅಡಚಣೆಗಳಿಗೆ ಕಾರಣವಾಗಬಹುದು ಎಂದು ಕೇಂದ್ರವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular