HomeKarnatakaBIG NEWS: ಮಂಥ್ಲಿ ಮನಿ ಹೆಸರಲ್ಲಿ ಮದ್ಯದಂಗಡಿಗಳಿಂದ 15 ಕೋಟಿ ಹಣ ವಸೂಲಿ: ಅಬಕಾರಿ ಸಚಿವರ...

BIG NEWS: ಮಂಥ್ಲಿ ಮನಿ ಹೆಸರಲ್ಲಿ ಮದ್ಯದಂಗಡಿಗಳಿಂದ 15 ಕೋಟಿ ಹಣ ವಸೂಲಿ: ಅಬಕಾರಿ ಸಚಿವರ ವಿರುದ್ಧ ಹೊಸ ಬಾಬ್ ಸಿಡಿಸಿದ ಆರ್.ಅಶೋಕ್

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ 500 ಕೋಟಿ ಲೂಟಿಯಾಗಿದೆ. ಕಾಂಗ್ರೆಸ್ ಸರ್ಕಾರದ ಲಂಚಾವತಾರದ ಮತ್ತೊಂದು ಕರಾಳ ಅಧ್ಯಾಯ ಬಹಿರಂಗಗೊಂಡಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.

ರಾಜ್ಯ ಮದ್ಯ ಮಾರಾಟಗಾರರ ಸಂಘ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯಪಾಲರಿಗೆ ಬರೆದಿರುವ ಪತ್ರದಲ್ಲಿ ಅಬಕಾರಿ ಸಚಿವರು ‘ಮಂಥ್ಲಿ ಮನಿ’ ಹೆಸರಿನಲ್ಲಿ ಮದ್ಯದ ಅಂಗಡಿಗಳಿಂದ ಪ್ರತಿ ತಿಂಗಳಿಗೆ 15 ಕೋಟಿ ರೂಪಾಯಿಯಂತೆ ವರ್ಷಕ್ಕೆ 180 ಕೋಟಿ ರೂ ಲಂಚ ಪಡೆಯುತ್ತಿದ್ದಾರೆ ಎಂದು ಆರೋಪಿಸಿ ಅಬಕಾರಿ ಸಚಿವರನ್ನು ಬದಲಾಯಿಸಲು ಕೋರಿದ್ದಾರೆ.

ವರ್ಗಾವಣೆ ದಂಧೆ, ಲೈಸೆನ್ಸ್ ಮಂಜೂರಾತಿ, ಮದ್ಯದ ಅಂಗಡಿಗಳಿಂದ ‘ಮಂಥ್ಲಿ ಮನಿ’ ಸೇರಿದಂತೆ ಅಬಕಾರಿ ಸಚಿವರು ವರ್ಷಕ್ಕೆ ಸುಮಾರು 500 ಕೋಟಿ ರೂಪಾಯಿ ಭ್ರಷ್ಟಾಚಾರ ಎಸಗುತ್ತಿದ್ದಾರೆ ಎಂದು ರಾಜ್ಯ ಮದ್ಯ ಮಾರಾಟಗಾರರ ಸಂಘ ಮಾಡಿರುವ ಆರೋಪ ಅತ್ಯಂತ ಗಂಭೀರವಾಗಿದ್ದು, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರನ್ನು ಈ ಕೂಡಲೇ ಸಚಿವ ಸ್ಥಾನದಿಂದ ವಜಾ ಮಾಡಿ ಲೋಕಾಯುಕ್ತ ತನಿಖೆಗೆ ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular