BREAKING NEWS: ಪೊಲೀಸ್ ಠಾಣೆ ಮುಂದಿನ ತೋಟದ ಮನೆಯಲ್ಲಿ ಅಕ್ರಮ ಮದ್ಯ ತಯಾರಿಕೆ: ಅಬಕಾರಿ ಅಧಿಕಾರಿಗಳ ದಾಳಿ

ಧಾರವಾಡ: ಪೊಲೀಸ್ ಠಾಣೆಯ ಮುಂದಿನ ತೋಟದ ಮನೆಯಲ್ಲಿ ಅಕ್ರಮ ಮದ್ಯ ತಯಾರಿಕೆ ನಡೆಯುತ್ತಿದ್ದು, ಖಚಿತ ಮಾಹಿತಿ ಮೇರೆಗೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನಲ್ಲಿ ನಡೆದಿದೆ.

ಹುಬ್ಬಳ್ಳಿಯ ಛಬ್ಬಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪೊಲೀಸ್ ಠಾಣೆಯ ಮುಂದಿನ ಒಂಟಿ ಮನೆ, ಪರಿಷತ್ ಸಭಾಪತಿ ಬಸವರಾಜ್ ಹೊರಟ್ತಿ ಅವರ ತೋಟದ ಪಕ್ಕದಲ್ಲೇ ಅಕ್ರಮ ಮದ್ಯ ತಯಾರಿಕೆ ನಡೆಯುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ಅಬಕಾರಿ ಎಸ್ ಪಿ ವಿಜಯ್ ಕುಮಾರ್ ನೇತೃತ್ವದ ತಂಡ ದಾಳಿ ನಡೆಸಿದೆ. ದಾಳಿ ವೇಳೆ ಡಿಎಸ್ ಪಿ ಬ್ಲ್ಯಾಕ್ ಹಾಗೂ ಇಂಪೀರಿಯಲ್ ಬ್ಲೂ ನಕಲಿ ಮದ್ಯ ತಯಾರಿಸುತ್ತಿರುವುದು ಪತ್ತೆಯಾಗಿದೆ.

ಅಪಾರ ಪ್ರಮಾಣದ ನಕಲಿ ಮದ್ಯ ಹಾಗೂ ಇತರೆ ವಸ್ತಿಗಳನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು, ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಅಮೃತ್ ಹಾಗೂ ಸಂದೀಪ್ ಎಂದು ಗುರುತಿಸಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read